alex Certify
ಕನ್ನಡ ದುನಿಯಾ       Mobile App
       

Kannada Duniya

ಜಡೆ ಹಿಡಿದು ಹೊಡೆದಾಡಿಕೊಂಡ ವಿದ್ಯಾರ್ಥಿನಿಯರು

assault-largeಪ್ರಾಂಶುಪಾಲರ ವರ್ಗಾವಣೆಗೆ ಸಂಬಂಧಿಸಿದಂತೆ ಕಾಲೇಜು ವಿದ್ಯಾರ್ಥಿನಿಯರ ಎರಡು ಗುಂಪು ಪರಸ್ಪರ ಜಡೆ ಹಿಡಿದು ಹೊಡೆದಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾರಾಣಿ ಕಾಲೇಜಿನಲ್ಲಿ ನಡೆದಿದೆ.

ಮಹಾರಾಣಿ ಕಾಲೇಜಿನ ಪ್ರಾಂಶುಪಾಲೆ ಕೋಮಲ ಅವರನ್ನು ವರ್ಗಾವಣೆಗೊಳಿಸಿದ್ದು, ವರ್ಗಾವಣೆಗೊಂಡರೂ ಅವರು ತಮ್ಮ ಸ್ಥಾನ ತೆರವುಗೊಳಿಸಿಲ್ಲವೆಂದು ಪ್ರತಿಭಟಿಸಿ ವಿದ್ಯಾರ್ಥಿನಿಯರ ಒಂದು ಗುಂಪು ಪ್ರತಿಭಟನೆ ನಡೆಸುತ್ತಿತ್ತು.

ಈ ವೇಳೆ ಪ್ರಾಂಶುಪಾಲೆ ಕೋಮಲ ಅವರ ಪ್ರತಿಕೃತಿ ದಹಿಸಲು ಮುಂದಾಗಿದ್ದು, ಪ್ರಾಂಶುಪಾಲರ ಪರವಿದ್ದ ವಿದ್ಯಾರ್ಥಿನಿಯರ ಗುಂಪು ಇದಕ್ಕೆ ಆಕ್ಷೇಪಿಸಿದಾಗ ವಾಗ್ವಾದ ಆರಂಭವಾಯಿತು. ಬಳಿಕ ಇದು ವಿಕೋಪಕ್ಕೆ ತಿರುಗಿದ್ದು, ಪರಸ್ಪರ ಹೊಡೆದಾಟಕ್ಕೆ ನಿಂತಿದ್ದಾರೆ. ಕೊನೆಗೆ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...