alex Certify
ಕನ್ನಡ ದುನಿಯಾ       Mobile App
       

Kannada Duniya

ಮುಕ್ತ ವಿವಿ ಸೇರಬಯಸುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ಸೇರಬಯಸುವ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯ ಧನ ಸಹಾಯ (ಯುಜಿಸಿ) ಆಯೋಗ ಸಿಹಿ ಸುದ್ದಿಯೊಂದನ್ನು ನೀಡಿದೆ.

ಬಿಇಡಿ ಸೇರಿದಂತೆ ಇನ್ನೂ 14 ಹೊಸ ಕೋರ್ಸ್ ಆರಂಭಿಸಲು ಯುಜಿಸಿ ಅನುಮತಿ ನೀಡಿದ್ದು, ಇದರಿಂದಾಗಿ ಈಗ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಒಟ್ಟು 31 ಕೋರ್ಸ್ ಗಳಿಗೆ ಮಾನ್ಯತೆ ಸಿಕ್ಕಂತಾಗಿದೆ.

ವಿಶ್ವವಿದ್ಯಾಲಯ, ಒಟ್ಟು 32 ಕೋರ್ಸ್ ಗಳಿಗೆ ಮಾನ್ಯತೆ ನೀಡುವಂತೆ ಮನವಿ ಮಾಡಿದ್ದು, ಯುಎಲ್ಎಲ್ಎಂ ಕೋರ್ಸ್ ಹೊರತುಪಡಿಸಿ ಉಳಿದೆಲ್ಲ ಕೋರ್ಸ್ ಗಳಿಗೆ ಯುಜಿಸಿ ಅನುಮತಿ ನೀಡಿದೆ.

ಕಳೆದ ಆಗಸ್ಟ್ ನಲ್ಲಿ ಮಾನ್ಯತೆ ನೀಡಿದ 17 ಕೋರ್ಸ್ ಗಳಿಗೆ ವಿಶ್ವವಿದ್ಯಾಲಯ ಈಗಾಗಲೇ ಪ್ರವೇಶಾತಿ ಪ್ರಕ್ರಿಯೆಯನ್ನು ಆರಂಭಿಸಿದ್ದು, ವಿದ್ಯಾರ್ಥಿಗಳು ದಂಡ ಶುಲ್ಕದೊಂದಿಗೆ ಪ್ರವೇಶ ಪಡೆಯಲು ಅಕ್ಟೋಬರ್ 20 ಕಡೆಯ ದಿನವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...