alex Certify
ಕನ್ನಡ ದುನಿಯಾ       Mobile App
       

Kannada Duniya

ವೈದ್ಯ ವಿದ್ಯಾರ್ಥಿಯನ್ನು ಹಿಗ್ಗಾಮುಗ್ಗಾ ಥಳಿಸಿದ ಪೊಲೀಸ್

medical

ಬೆಂಗಳೂರು: ಬೆಂಗಳೂರಿನಲ್ಲಿ ಹೊರಗಿನ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣ ಮರುಕಳಿಸುತ್ತಿವೆ. ತಾಂಜೇನಿಯಾ ವಿದ್ಯಾರ್ಥಿನಿ ಮೇಲೆ ನಡೆದ ಪ್ರಕರಣ ದೇಶದ ಗಮನ ಸೆಳೆದಿತ್ತು. ಇದೀಗ ಪೊಲೀಸರೇ ಮೆಡಿಕಲ್ ವಿದ್ಯಾರ್ಥಿಯನ್ನು ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ.

ತಾಂಜೇನಿಯಾ ಘಟನೆಯ ಬಳಿಕ ಪೊಲೀಸರು ಸ್ಟ್ರಿಕ್ಟ್ ಆಗಿ ಡ್ಯೂಟಿ ಮಾಡುತ್ತಿದ್ದು, ಹೀಗೆ ಮಾಡುವ ಭರಾಟೆಯಲ್ಲಿ ಅಮಾಯಕರ ಮೇಲೂ ಪ್ರತಾಪ ತೋರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತಡರಾತ್ರಿ ಪೀಣ್ಯ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಕೇರಳ ಮೂಲದ ಮೆಡಿಕಲ್ ವಿದ್ಯಾರ್ಥಿ ಸಿಬೀನ್ ಎಂಬುವವರ ಮೇಲೆ ತೀವ್ರವಾಗಿ ಹಲ್ಲೆ ಮಾಡಿದ್ದಾರೆ. ಬೀದರ್ ಮೆಡಿಕಲ್ ಕಾಲೇಜೊಂದರಲ್ಲಿ ಓದುತ್ತಿರುವ ಸಿಬೀನ್ ಪ್ರಾಕ್ಟೀಸ್ ಗೆಂದು ಬಾಗಲಗುಂಟೆಯ ನರ್ಸಿಂಗ್ ಹೋಂ ಒಂದರಲ್ಲಿ ಕೆಲಸ ಮಾಡುತ್ತಿದ್ದರು.

ನಿನ್ನೆ ರಾತ್ರಿ ಅವರು ಕೆಲಸ ಮುಗಿಸಿ ಕಿರ್ಲೋಸ್ಕರ್ ಲೇ ಔಟ್ ನಲ್ಲಿರುವ ಮನೆಗೆ ಹೊರಟಿದ್ದ ಸಂದರ್ಭದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸ್ ಇನ್ಸ್ ಪೆಕ್ಟರ್ ಲಾಠಿಯಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಅಲ್ಲದೇ, ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾರೆ ಎಂದು ಸಿಬೀನ್ ಆರೋಪ ಮಾಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...