alex Certify
ಕನ್ನಡ ದುನಿಯಾ       Mobile App
       

Kannada Duniya

‘ಕಾವೇರಿ’ ಆನ್ ಲೈನ್ ಸೇವೆಯಿಂದ ಸಾರ್ವಜನಿಕರಿಗೆ ಸಿಗುವ ಲಾಭಗಳೇನು…?

ಸರ್ಕಾರದ ಸೌಲಭ್ಯಗಳು ಮಧ್ಯವರ್ತಿಗಳ ಪಾಲಾಗಬಾರದೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ‘ಕಾವೇರಿ’ ಆನ್ ಲೈನ್ ಸೇವೆಯನ್ನು ಆರಂಭಿಸಿದ್ದು, ಶುಕ್ರವಾರದಂದು ಮುಖ್ಯಮಂತ್ರಿ ಕುಮಾರಸ್ವಾಮಿ ಇದಕ್ಕೆ ಚಾಲನೆ ನೀಡಿದ್ದಾರೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಭಿವೃದ್ಧಿಪಡಿಸಿರುವ ಕಾವೇರಿ ಆನ್ ಲೈನ್ ಸೇವೆ ಸಹಾಯದಿಂದ ಸಾರ್ವಜನಿಕರು, ಸ್ಥಿರಾಸ್ತಿಗಳ ಋಣಭಾರ ಪ್ರಮಾಣ ಪತ್ರ ಮತ್ತು ನೋಂದಾಯಿತ ದಸ್ತಾವೇಜುಗಳ ದೃಢೀಕೃತ ನಕಲು ಪ್ರತಿಗಳನ್ನು ಪಡೆಯಬಹುದಾಗಿದೆ.

ಅಷ್ಟೇ ಅಲ್ಲ, ಸಾರ್ವಜನಿಕರು ತಮ್ಮ ಆಸ್ತಿಯ ವಿವರಗಳನ್ನು ತಂತ್ರಾಂಶದಲ್ಲಿ ನಮೂದಿಸುವ ಮೂಲಕ, ಸ್ಥಿರಾಸ್ತಿಗಳ ಮೌಲ್ಯ ಮತ್ತು ಮುದ್ರಾಂಕ ಶುಲ್ಕವನ್ನು ಲೆಕ್ಕ ಮಾಡಬಹುದಾಗಿದೆ.

ಕಾವೇರಿ ಆನ್ ಲೈನ್ ಸೇವೆಯಿಂದ ಸಾರ್ವಜನಿಕರಿಗೆ ಪದೇ ಪದೇ ಸಬ್ ರಿಜಿಸ್ಟ್ರಾರ್ ಕಚೇರಿಗೆ ಭೇಟಿ ನೀಡುವುದು ತಪ್ಪುತ್ತದಲ್ಲದೆ ಆನ್ ಲೈನ್ ಮೂಲಕ ದಸ್ತಾವೇಜನ್ನು ನೋಂದಣಿಗೆ ಸಲ್ಲಿಸುವ ಅವಕಾಶ ಕಲ್ಪಿಸುತ್ತದೆ.

ದಸ್ತಾವೇಜಿನ ನೋಂದಣಿಗೆ ಆನ್ ಲೈನ್ ಮೂಲಕವೇ ಮುಂಗಡವಾಗಿ ಸಮಯ ನಿಗದಿಪಡಿಸಿಕೊಳ್ಳಬಹುದಾಗಿದ್ದು, ಇದಕ್ಕೂ ಮುನ್ನ ಸಂಬಂಧಪಟ್ಟ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಇದರ ಜೊತೆಗೆ ಸಾರ್ವಜನಿಕರು ಯಾವುದೇ ಸ್ಥಿರಾಸ್ತಿ ಮಾರ್ಗಸೂಚಿ ಮೌಲ್ಯ ತಿಳಿಯಲು ‘ಮೌಲ್ಯ’ ಎಂಬ ಹೆಸರಿನ ಮೊಬೈಲ್ ಆಪ್ ಅಭಿವೃದ್ಧಿಪಡಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...