alex Certify
ಕನ್ನಡ ದುನಿಯಾ       Mobile App
       

Kannada Duniya

ನಟ ಸುದೀಪ್ ನಿವಾಸಕ್ಕೆ ಮಾಜಿ ಸಚಿವ ಶ್ರೀರಾಮುಲು ಭೇಟಿ

ಮಾಜಿ ಸಚಿವ ಹಾಗೂ ಶಾಸಕ ಬಿ. ಶ್ರೀರಾಮುಲು ಇಂದು ಖ್ಯಾತ ನಟ ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಸುದೀಪ್ ಅವರ ಜೆಪಿ ನಗರ ನಿವಾಸಕ್ಕೆ ತೆರಳಿದ ಶ್ರೀರಾಮಲು, ಪ್ರಧಾನಿ ನರೇಂದ್ರ ಮೋದಿಯವರ ನಾಲ್ಕು ವರ್ಷಗಳ ಆಡಳಿತದ ಸಾಧನೆಯ ಪುಸ್ತಕವನ್ನು ನೀಡಿದ್ದಾರೆ.

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ನಾಯಕರು, ಸೆಲೆಬ್ರಿಟಿಗಳನ್ನು ಭೇಟಿ ಮಾಡಿ ಸರ್ಕಾರದ ಸಾಧನೆಯನ್ನು ವಿವರಿಸುತ್ತಿದ್ದು, ಇದರ ಭಾಗವಾಗಿ ಶ್ರೀರಾಮುಲು, ಸುದೀಪ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಶ್ರೀರಾಮುಲು ಅವರ ಜೊತೆ ಸುದೀಪ್ ಆತ್ಮೀಯ ಸಂಬಂಧವನ್ನು ಹೊಂದಿದ್ದು, ಈ ಹಿನ್ನೆಲೆಯಲ್ಲಿಯೇ ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಶ್ರೀರಾಮುಲು ಸ್ಪರ್ಧಿಸಿದ್ದ ವೇಳೆ ಸುದೀಪ್, ಸಿದ್ದರಾಮಯ್ಯನವರ ಪರ ಪ್ರಚಾರಕ್ಕೆ ಹೋಗದಿರಲು ನಿರ್ಧರಿಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...