alex Certify
ಕನ್ನಡ ದುನಿಯಾ       Mobile App
       

Kannada Duniya

ಜಾಲತಾಣಗಳಲ್ಲಿ ಹರಿದಾಡ್ತಿದೆ ಸುಧಾಮೂರ್ತಿಯವರ ಫೋಟೋ

IMG-20160821-WA0104

ಬೆಂಗಳೂರು: ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ಪತ್ನಿ ಸುಧಾಮೂರ್ತಿ ಅವರು ಸರಳತೆಗೆ ಹೆಸರಾದವರು. ನೂರಾರು ಕೋಟಿ ಆಸ್ತಿಯ ಒಡೆಯರಾದರೂ, ತಮ್ಮದೇ ಆದ ಸರಳ ವ್ಯಕ್ತಿತ್ವದಿಂದ ಗಮನ ಸೆಳೆದವರು.

ಇಂತಹ ಸರಳ ವ್ಯಕ್ತಿತ್ವದ ಸುಧಾಮೂರ್ತಿ ಅವರ ಮತ್ತೊಂದು ಸರಳತೆ ವ್ಯಕ್ತವಾಗಿದೆ. ಶ್ರೀ ರಾಘವೇಂದ್ರ ಸ್ವಾಮಿಗಳ 345ನೇ ಆರಾಧನಾ ಮಹೋತ್ಸವದ ಹಿನ್ನಲೆಯಲ್ಲಿ ಸುಧಾಮೂರ್ತಿ ಸೇವಾಕಾರ್ಯದಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದಾರೆ. ಬೆಂಗಳೂರು ಜಯನಗರದಲ್ಲಿರುವ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸುಧಾಮೂರ್ತಿ ಅವರು, ತರಕಾರಿಯನ್ನು ಸ್ವಚ್ಛಗೊಳಿಸಿದ್ದಾರೆ ಎನ್ನಲಾಗಿದೆ. ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಸುಧಾಮೂರ್ತಿ ಅವರು ರಾಯರ ಉತ್ಸವದಲ್ಲಿ ಶುಕ್ರವಾರ, ಶನಿವಾರ ಮತ್ತು ಭಾನುವಾರ ಸೇವಾಕಾರ್ಯದಲ್ಲಿ ಭಾಗಿಯಾಗಿದ್ದರು. ಅಲ್ಲಿ ವಿವಿಧ ಕೆಲಸ ಮಾಡಿದ್ದಾರೆ. ತರಕಾರಿಯನ್ನು ಸ್ವಚ್ಛಗೊಳಿಸುತ್ತಿರುವ ಚಿತ್ರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...