alex Certify
ಕನ್ನಡ ದುನಿಯಾ       Mobile App
       

Kannada Duniya

ಸುವರ್ಣ ಸೌಧದ ಬೀಗ ಒಡೆದವರು ರೈತರೇ ಅಲ್ಲ ಎಂದ ಸಿಎಂ

ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಪಾವತಿಗೆ ಆಗ್ರಹಿಸಿ ಹಾಗೂ ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸಬೇಕೆಂದು ಒತ್ತಾಯಿಸಿ ಬೆಳಗಾವಿಯಲ್ಲಿ ಪ್ರತಿಭಟಿಸುತ್ತಿದ್ದ ರೈತರು ಬಳಿಕ ಸುವರ್ಣ ಸೌಧದ ಗೇಟಿನ ಬೀಗ ಒಡೆದು ಕಬ್ಬು ತುಂಬಿದ ಲಾರಿಯನ್ನು ಒಳ ನುಗ್ಗಿಸಿದ್ದರು.

ಇದಕ್ಕೆ ಬೆಂಗಳೂರಿನಲ್ಲಿ ಖಾರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಕೇವಲ 30-40 ಮಂದಿ ಮಾಡುತ್ತಿರುವ ಪ್ರತಿಭಟನೆಗೆ ಸರ್ಕಾರ ಜಗ್ಗುವುದಿಲ್ಲ. ಸುವರ್ಣ ಸೌಧದ ಬೀಗ ಒಡೆದವರು ರೈತರಲ್ಲ. ರೈತರ ಹೆಸರಿಗೆ ಮಸಿ ಬಳಿಯುತ್ತಿರುವ ಗೂಂಡಾಗಳು ಎಂದಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಸಕ್ಕರೆ ಕಾರ್ಖಾನೆಗಳು ಬಾಕಿ ಪಾವತಿಸಿಲ್ಲವೆಂದು ಪ್ರತಿಭಟನಾಕಾರರು ಹೇಳುತ್ತಿದ್ದಾರೆ. ಹಾಗಾದರೆ ಇಲ್ಲಿಯವರೆಗೂ ಅವರು ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಈಗ ಏಕಾಏಕಿ ಪ್ರತಿಭಟನೆ ನಡೆಸುತ್ತಿರುವ ಹಿಂದಿನ ಉದ್ದೇಶವೇನು ಎಂದು ಕೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...