alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಕಿಗೆ ಭಸ್ಮವಾಯ್ತು ಬೆಳೆದು ನಿಂತಿದ್ದ 5 ಎಕರೆ ಕಬ್ಬು

ಹಾವೇರಿ: ಬೆಂಕಿ ತಗುಲಿ ಬರೋಬ್ಬರಿ 5 ಎಕರೆಯಲ್ಲಿ ಬೆಳೆದು ನಿಂತಿದ್ದ ಕಬ್ಬು ಸುಟ್ಟು ಭಸ್ಮವಾದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ಮಾದಾಪುರದಲ್ಲಿ ನಡೆದಿದೆ.

ರೈತ ಯುವರಾಜ ಬಳ್ಳಾರಿ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಕಬ್ಬು ಬೆಳೆಯಲಾಗಿದ್ದು, ಟ್ರಾನ್ಸ್ ಫಾರ್ಮರ್ ನಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದ್ದು, ಜಮೀನಿನಲ್ಲಿದ್ದ ಕಬ್ಬು, ತೆಂಗಿನಮರಗಳು ಸುಟ್ಟು ಹೋಗಿವೆ.

ಗ್ರಾಮಸ್ಥರು ಬೆಂಕಿ ನಂದಿಸಲು ಪ್ರಯತ್ನ ನಡೆಸಿದರಾದರೂ, ಭಾರೀ ಪ್ರಮಾಣದಲ್ಲಿ ಬೆಂಕಿ ಆವರಿಸಿದ್ದರಿಂದ ಹತ್ತಿರಕ್ಕೆ ಹೋಗಲು ಸಾಧ್ಯವಾಗಿಲ್ಲ.

ನೋಡ ನೋಡುತ್ತಿದ್ದಂತೆಯೇ ಇಡೀ ಗದ್ದೆಯಲ್ಲಿದ್ದ ಕಬ್ಬು ಸುಟ್ಟು ಹೋಗಿದೆ. ಕಬ್ಬು ಕಟಾವಿಗೆ ಬಂದಿತ್ತಾದರೂ,  ಕಟಾವು ಮಾಡಿ ಕಾರ್ಖಾನೆಗೆ ಸಾಗಿಸದ ಕಾರಣ, ಗದ್ದೆಯಲ್ಲೇ ಒಣಗುತ್ತಿತ್ತು. ಈಗ ಬೆಂಕಿ ತಗುಲಿ 5 ಲಕ್ಷ ರೂ. ಗೂ ಅಧಿಕ ನಷ್ಟವಾಗಿದೆ. ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...