alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್ ! ಮತ್ತೊಬ್ಬ ಅಧಿಕಾರಿಯಿಂದ ಆತ್ಮಹತ್ಯೆ ಯತ್ನ

suicide attemptಡಿವೈಎಸ್ಪಿಗಳಾದ ಕಲ್ಲಪ್ಪ ಹಂಡಿಭಾಗ್, ಎಂ.ಕೆ. ಗಣಪತಿ ಆತ್ಮಹತ್ಯೆ, ಪಿಎಸ್ಐ ರೂಪಾ ತಂಬದ್, ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣದ ನಂತರ ಈಗ ಮತ್ತೊಬ್ಬ ಅಧಿಕಾರಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನ ನಡೆಸಿರುವ ಘಟನೆ ನಡೆದಿದೆ.

ಹಾಸನ ಉಪ ವಿಭಾಗಾಧಿಕಾರಿ ವಿಜಯಾ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದು, ಇಂದು ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ಹೇಳಲಾಗಿದೆ. ಕೂಡಲೇ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.

ಈ ಕುರಿತು ಮಾತನಾಡಿರುವ ವಿಜಯಾ ಅವರ ತಾಯಿ, ತಮ್ಮ ಮಗಳು ಆತ್ಮಹತ್ಯೆಗೆ ಯತ್ನಿಸಿರುವುದಕ್ಕೆ ಕೆಲಸದ ಒತ್ತಡವೇ ಕಾರಣವೆಂದು ಹೇಳಿದ್ದಾರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...