alex Certify
ಕನ್ನಡ ದುನಿಯಾ       Mobile App
       

Kannada Duniya

ಪತ್ನಿ, ಮಕ್ಕಳನ್ನು ಹತ್ಯೆ ಮಾಡಿ ನೇಣು ಬಿಗಿದುಕೊಂಡ ಪತಿ

suicide_generic_2ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳು ಹಾಗೂ ಪತ್ನಿಯನ್ನು ಹತ್ಯೆ ಮಾಡಿ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಮಾಳಿಗೊಂಡನಹಳ್ಳಿಯಲ್ಲಿ ನಡೆದಿದೆ.

ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಸತೀಶ್ ಎಂಬಾತ ತನ್ನ ಪತ್ನಿ 23 ವರ್ಷದ ಮಂಜುಳಾಳ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ. ಬಳಿಕ ಮಕ್ಕಳಾದ 5 ವರ್ಷದ ವಿಜಯ್ ಹಾಗೂ 2 ವರ್ಷದ ಶ್ರೇಯಾರನ್ನೂ ಕೊಲೆಗೈದು ಬಳಿಕ ತಾನು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ.

ಪ್ರಕರಣ ದಾಖಲಿಸಿಕೊಂಡಿರುವ ಕುಂಬಳಗೋಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣವೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...