alex Certify
ಕನ್ನಡ ದುನಿಯಾ       Mobile App
       

Kannada Duniya

ಜ್ಞಾನಭಾರತಿ ಠಾಣೆ ಪೊಲೀಸರಿಂದ ಸುನಾಮಿ ಕಿಟ್ಟಿ ಅರೆಸ್ಟ್

ವ್ಯಕ್ತಿಯೊಬ್ಬರನ್ನು ಅಪಹರಿಸಿ ಗನ್ ತೋರಿಸಿ ಚಿತ್ರಹಿಂಸೆ ನೀಡಿದ ಆರೋಪ ಹೊತ್ತಿದ್ದ ನಟ ಹಾಗೂ ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಸುನಾಮಿ ಕಿಟ್ಟಿ ಹಾಗೂ ಆತನ ಇಬ್ಬರು ಸ್ನೇಹಿತರನ್ನು ಬೆಂಗಳೂರಿನ ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸುನಾಮಿ ಕಿಟ್ಟಿ, ಆತನ ಸ್ನೇಹಿತರಾದ ಅರ್ಜುನ್ ಹಾಗೂ ಯೋಗೇಂದ್ರ ಬಂಧಿತ ಆರೋಪಿಗಳಾಗಿದ್ದು, ಮತ್ತೊಬ್ಬ ಪ್ರಮುಖ ಆರೋಪಿ ಸುನೀಲ್ ಎಂಬಾತನ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.

ಸುನೀಲ್ ನ ಪತ್ನಿ ಜೊತೆ ತೌಶೀಕ್ ಎಂಬಾತ ಅಕ್ರಮ ಸಂಬಂಧ ಹೊಂದಿದ್ದ ಶಂಕೆಯ ಹಿನ್ನಲೆಯಲ್ಲಿ ಸುನಾಮಿ ಕಿಟ್ಟಿ, ಸುನೀಲ್, ಯೋಗೇಂದ್ರ ಹಾಗೂ ಅರ್ಜುನ್ ಆತನನ್ನು ಅಪಹರಿಸಲು ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಬಾರ್ ಅಂಡ್ ರೆಸ್ಟೋರೆಂಟ್ ಗೆ ತೆರಳಿದ್ದರೆಂದು ಹೇಳಲಾಗಿದೆ.

ಈ ವೇಳೆ ಬಾರ್ ಸಪ್ಲೇಯರ್ ಗಿರೀಶ್ ಎಂಬಾತನನ್ನು ಅಪಹರಿಸಿದ್ದು, ಆತನಿಗೆ ಗನ್ ತೋರಿಸಿ ಚಿತ್ರಹಿಂಸೆ ನೀಡಿ ಆತನ ಮೂಲಕ ತೌಶೀಕ್ ನನ್ನು ಕರೆಸಿಕೊಂಡಿದ್ದರೆಂದು ಹೇಳಲಾಗಿದೆ. ಬಳಿಕ ಇಬ್ಬರ ಮೇಲೂ ಹಲ್ಲೆ ನಡೆಸಿ ಪೊಲೀಸರಿಗೆ ದೂರು ನೀಡದಂತೆ ಎಚ್ಚರಿಸಿ ಕಳುಹಿಸಿದ್ದರೆನ್ನಲಾಗಿದ್ದು, ಇದೀಗ ಪ್ರಕರಣ ದಾಖಲಾದ ಬಳಿಕ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...