alex Certify
ಕನ್ನಡ ದುನಿಯಾ       Mobile App
       

Kannada Duniya

‘ಅಲ್ಲಾ –ರಾಮನ ನಡುವೆ ಸ್ಪರ್ಧೆ’: ವಿವಾದಿತ ಹೇಳಿಕೆ ನೀಡಿದ ಬಿ.ಜೆ.ಪಿ. ಶಾಸಕ

ಮಂಗಳೂರು: ಬಂಟ್ವಾಳ ಕ್ಷೇತ್ರದ ಕಲ್ಲಡ್ಕದಲ್ಲಿ ನಡೆದ ಬಿ.ಜೆ.ಪಿ. ಸಮಾವೇಶದಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿವಾದಿತ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಮುಂದಿನ ವಿಧಾನಸಭೆ ಚುನಾವಣೆ ರಮಾನಾಥ ರೈ ಮತ್ತು ರಾಜೇಶ್ ನಾಯಕ್ ಅವರ ನಡುವಿನ ಸ್ಪರ್ಧೆಯಲ್ಲ, ಅಲ್ಲಾ ಮತ್ತು ರಾಮನ ನಡುವಿನ ಸ್ಪರ್ಧೆಯಾಗಿದೆ ಎಂದು ಸುನಿಲ್ ಕುಮಾರ್ ಹೇಳಿದ್ದಾರೆ.

ಬಂಟ್ವಾಳದಲ್ಲಿ ಮುಸ್ಲಿಮರ ಮತಗಳಿಂದ 6 ಸಲ ಆಯ್ಕೆಯಾಗಿದ್ದೇನೆ ಎಂದು ಸಚಿವ ರಮಾನಾಥ ರೈ ಹೇಳಿದ್ದಾರೆ. ಹಿಂದೂಗಳ ಮತಗಳು ಬೇಡವೆನ್ನುವವರಿಗೆ ನಾವು ಬೆಂಬಲಿಸಬೇಕಾ? ಬಂಟ್ವಾಳಕ್ಕೆ ಯಾರು ಬೇಕೆನ್ನುವುದನ್ನು ಜನ ತೀರ್ಮಾನಿಸಬೇಕೆಂದು ಅವರು ಹೇಳಿದ್ದಾರೆ.

ರಾಜೇಶ್ ನಾಯಕ್ ಮತ್ತು ರಮಾನಾಥ ರೈ ಅವರಲ್ಲಿ ಯಾರನ್ನು ಗೆಲ್ಲಿಸಬೇಕೆಂದು ನೀವೇ ತೀರ್ಮಾನಿಸಿ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ರಮಾನಾಥ ರೈ ಅವರು ಮುಸ್ಲಿಮರ ಬೆಂಬಲದಿಂದ 6 ಸಲ ಶಾಸಕನಾಗಿ ಆಯ್ಕೆಯಾಗಿದ್ದೇನೆ ಎಂದಿದ್ದರು. ಅದಕ್ಕೆ ಪ್ರತಿಕ್ರಿಯೆ ರೂಪದಲ್ಲಿ ಮಾತನಾಡಿದ ಶಾಸಕ ಸುನಿಲ್ ಕುಮಾರ್, ಮುಂದಿನ ಚುನಾವಣೆ ಅಲ್ಲಾ –ರಾಮನ ನಡುವಿನ ಸ್ಪರ್ಧೆಯಾಗಿದೆ ಎಂದಿದ್ದಾರೆ. ಹೀಗೆ ಹೇಳುವ ಮೂಲಕ ತಮ್ಮ ವೋಟ್ ಬ್ಯಾಂಕ್ ಗಳನ್ನು ಭದ್ರಪಡಿಸಿಕೊಳ್ಳಲು ಎರಡೂ ಪಕ್ಷದವರು ಮುಂದಾಗಿದ್ದು, ಇಂತಹ ಹೇಳಿಕೆ ನೀಡುತ್ತಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...