alex Certify
ಕನ್ನಡ ದುನಿಯಾ       Mobile App
       

Kannada Duniya

ಹೆಚ್.ಡಿ.ಕೆ. ಮುಂದಿನ ಸಿ.ಎಂ : ಕೋಡಿಹಳ್ಳಿ ಶ್ರೀ ಭವಿಷ್ಯ

hdk-d

ರಾಜ್ಯದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್, ಜೆ.ಡಿ.ಎಸ್., ಬಿ.ಜೆ.ಪಿ. ಈಗಾಗಲೇ ಸಿದ್ಧತೆ ನಡೆಸಿವೆ.

ಇದೇ ಸಂದರ್ಭದಲ್ಲಿ ಹಾರ್ನಹಳ್ಳಿ ಕೋಡಿಮಠದ ಶ್ರೀಗಳು ಹೇಳಿರುವ ಭವಿಷ್ಯ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಬರಲಾರದು ಎನ್ನುವುದನ್ನು ಪರೋಕ್ಷವಾಗಿ ತಿಳಿಸಿದೆ.

ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಹೆಚ್. ಡಿ. ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಶ್ರೀಗಳು ಹೇಳಿದ್ದಾರೆ.

ಶ್ರೀಗಳ ನಿಖರವಾದ ಭವಿಷ್ಯ ಮನೆಮಾತಾಗಿದ್ದು, ‘ಬಿತ್ತಿದ ಬೆಳಸು ಪರರು ಕೊಯ್ದಾರು’ ಎಂದು ಮುಂದಿನ ಚುನಾವಣೆಯ ಕುರಿತಾಗಿ ಹೇಳಿದ್ದಾರೆ.

ಅವರ ಭವಿಷ್ಯವನ್ನು ಕೆಲವರು ಅರ್ಥೈಸಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಗಲಾರದು. ಕಾಂಗ್ರೆಸ್, ಜೆ.ಡಿ.ಎಸ್. ಹಾಗೂ ಬಿ.ಜೆ.ಪಿ.ಗೆ ಬಹುಮತ ಸಿಗದ ಕಾರಣ, ಮೈತ್ರಿ ಸರ್ಕಾರದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾರು ಎಷ್ಟೇ ಲೆಕ್ಕಾಚಾರ ಹಾಕಿದರೂ ಅದು ಉಲ್ಟಾ ಆಗಬಹುದಾಗಿದೆ. ಯಾವ ಪಕ್ಷಕ್ಕೂ ಬಹುಮತ ಸಿಗದೇ ಹೆಚ್.ಡಿ. ಕುಮಾರಸ್ವಾಮಿ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...