alex Certify
ಕನ್ನಡ ದುನಿಯಾ       Mobile App
       

Kannada Duniya

ಜಟಿಲವಾಯ್ತು ರಾಸಲೀಲೆ ಸ್ವಾಮಿಯ ರಹಸ್ಯ

ಬೆಂಗಳೂರು: ಮಠದಲ್ಲಿಯೇ ರಾಸಲೀಲೆ ನಡೆಸಿದ ಹುಣಸಮಾರನಹಳ್ಳಿಯ ಮದ್ದೇವಣಾಪುರ ಮಠದ ದಯಾನಂದ ಸ್ವಾಮೀಜಿ ಅವರನ್ನು ಹೊರ ಹಾಕಬೇಕೆಂದು ಒತ್ತಾಯಿಸಿ, ಭಕ್ತರು ಹೋರಾಟ ಮುಂದುವರೆಸಿದ್ದಾರೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ಭಕ್ತರು ಮಠದ ಎದುರು ಆಹೋರಾತ್ರಿ ಹೋರಾಟ ಕೈಗೊಂಡಿದ್ದಾರೆ. ದಯಾನಂದ ನಾಪತ್ತೆಯಾಗಿದ್ದು, ಅವರನ್ನು ಹಾಗೂ ಅವರ ಕುಟುಂಬದವರನ್ನು ಮಠದಿಂದ ಹೊರ ಹಾಕಬೇಕೆಂದು ಭಕ್ತರು ಒತ್ತಾಯಿಸಿದ್ದಾರೆ.

ಈ ನಡುವೆ ವೀರಶೈವ ಮಹಾಸಭಾದ ಪ್ರಮುಖರು ಮಠಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಭಕ್ತರು ಹಾಗೂ ಸ್ವಾಮೀಜಿಗಳೊಂದಿಗೆ ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳುವುದಾಗಿ ತಿಳಿಸಿದ್ದಾರೆ.

ಇನ್ನು ಶ್ರೀಶೈಲ ಜಗದ್ಗುರುಗಳು ಘಟನೆ ಬಗ್ಗೆ ಮಾಹಿತಿ ಪಡೆದಿದ್ದು, ಅವರೂ ಮಠಕ್ಕೆ ಭೇಟಿ ನೀಡಿ ಭಕ್ತರೊಂದಿಗೆ ಚರ್ಚಿಸುವ ಸಾಧ್ಯತೆ ಇದೆ.

ರಾಸಲೀಲೆ ಸಿ.ಡಿ.ಯನ್ನು ಮುಂದಿಟ್ಟುಕೊಂಡು ಕೆಲವರು ಮಠದ ಆಸ್ತಿಯನ್ನು ಕಬಳಿಸಲು ಹುನ್ನಾರ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಭಕ್ತರ ಒಂದು ಗುಂಪು ಮಠದಿಂದ ಸ್ವಾಮೀಜಿಯನ್ನು ಹೊರಹಾಕಲು ಒತ್ತಾಯಿಸಿದ್ದರೆ, ಮತ್ತೊಂದು ಗುಂಪು ತನಿಖೆಯ ಬಳಿಕ ಕ್ರಮ ಕೈಗೊಳ್ಳಬೇಕೆಂದು ಹೇಳಿ ಸ್ವಾಮೀಜಿ ಬೆಂಬಲಕ್ಕೆ ನಿಂತಿದೆ ಎನ್ನಲಾಗಿದೆ. ಮಠದ ಬಳಿ ಭದ್ರತೆಗೆ ಪೊಲೀಸರನ್ನು ನಿಯೋಜಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...