alex Certify
ಕನ್ನಡ ದುನಿಯಾ       Mobile App
       

Kannada Duniya

ತೀರ್ಥರೂಪಿಣಿಯಾಗಿ ದರ್ಶನ ನೀಡಿದ ಕಾವೇರಿ

caver

ಮಡಿಕೇರಿ: ಕನ್ನಡ ನಾಡಿನ ಜೀವನದಿ, ಕೊಡವರ ದೇವತೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ದರ್ಶನ ನೀಡಿದ್ದು, ಅಪಾರ ಸಂಖ್ಯೆಯ ಭಕ್ತರು ತೀರ್ಥೋದ್ಭವಕ್ಕೆ ಸಾಕ್ಷಿಯಾಗಿದ್ದಾರೆ.

ಭಾಗಮಂಡಲ ಸಮೀಪದ ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಬೆಳಿಗ್ಗೆ 6.29 ಕ್ಕೆ ಪವಿತ್ರ ಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಕಾವೇರಿ ಮಾತೆ ದರ್ಶನ ನೀಡಿದ್ದಾಳೆ. ಇದಕ್ಕೂ ಮೊದಲು ಪುರೋಹಿತರು ವಿಶೇಷ ಪೂಜೆ, ಹೋಮ ನೆರವೇರಿಸಿ, ಕಾವೇರಿ ಮಾತೆಯನ್ನು ಪ್ರಾರ್ಥಿಸಿದ್ದಾರೆ. ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರು ಕಾವೇರಿ ಮಾತೆಗೆ ನಮಿಸಿದ್ದಾರೆ.

ತಲಕಾವೇರಿಯ ಕುಂಡಿಕೆಯಲ್ಲಿ ಕಾವೇರಿ ಮಾತೆ ದರ್ಶನ ನೀಡುತ್ತಲೇ ಅಪಾರ ಸಂಖ್ಯೆಯಲ್ಲಿದ್ದ ಜನ ಬಾಟಲಿ, ಕ್ಯಾನ್, ಕೊಡಗಳಲ್ಲಿ ತೀರ್ಥ ಸಂಗ್ರಹಿಸಿಕೊಳ್ಳಲು ಮುಂದಾದರು. ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ಭಕ್ತರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...