alex Certify
ಕನ್ನಡ ದುನಿಯಾ       Mobile App
       

Kannada Duniya

ಕರುಣಾನಿಧಿಯವರ ನಿಧನಕ್ಕೆ ರಾಜ್ಯದಲ್ಲಿಯೂ ಶೋಕಾಚರಣೆ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿಯವರ ನಿಧನಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ರಾಜ್ಯದ ಬಹುತೇಕ ರಾಜಕೀಯ ನಾಯಕರು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

ಇಂದು ಚೆನ್ನೈನಲ್ಲಿ ನಡೆಯಲಿರುವ ಕರುಣಾನಿಧಿ ಅವರ ಅಂತ್ಯಸಂಸ್ಕಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರೂ ಸೇರಿದಂತೆ ರಾಜ್ಯದ ಹಲವು ಸಚಿವರು ಹಾಗೂ ರಾಜಕೀಯ ಗಣ್ಯರು ಪಾಲ್ಗೊಳ್ಳುವ ಸಾಧ್ಯತೆ ಇದೆ.

ಇದರ ಮಧ್ಯೆ ರಾಜ್ಯ ಸರ್ಕಾರ, ಕರುಣಾನಿಧಿಯವರ ನಿಧನದ ಪ್ರಯುಕ್ತ ರಾಜ್ಯದಲ್ಲಿ ಇಂದು ಒಂದು ದಿನದ ಶೋಕಾಚರಣೆಯನ್ನು ಘೋಷಿಸಿದ್ದು, ಯಾವುದೇ  ಸಾರ್ವಜನಿಕ ಸಮಾರಂಭಗಳು ಹಾಗೂ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲವೆಂದು ತಿಳಿಸಿದೆ. ಜೊತೆಗೆ ಎಲ್ಲ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟಕ್ಕೆ  ಹಾರಿಸಲಾಗುವುದು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...