alex Certify
ಕನ್ನಡ ದುನಿಯಾ       Mobile App
       

Kannada Duniya

ಟ್ಯಾಂಕರ್ ಪಲ್ಟಿಯಾಗಿ ಭಾರೀ ಗ್ಯಾಸ್ ಸೋರಿಕೆ

tank man

ಮಂಗಳೂರು: ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಭಾರೀ ಪ್ರಮಾಣದ ಗ್ಯಾಸ್ ಸೋರಿಕೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಸೂರಿಕಮೇರು ಎಂಬ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ.

ಬೃಹತ್ ಗಾತ್ರದ ಗ್ಯಾಸ್ ಟ್ಯಾಂಕರ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚರಿಸುವಾಗ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ಟ್ಯಾಂಕರ್ ನಲ್ಲಿದ್ದ ಗ್ಯಾಸ್ ಸೋರಿಕೆಯಾಗತೊಡಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸೂರಿಕಮೇರು ಗ್ರಾಮದ ಜನರನ್ನು ಸ್ಥಳಾಂತರಿಸಲಾಗಿದೆ. ಸ್ಥಳಕ್ಕೆ 10 ಅಗ್ನಿಶಾಮಕ ವಾಹನ ತೆರಳಿದ್ದು, ಸಂಭವಿಸಬಹುದಾದ ದುರಂತ ತಪ್ಪಿಸಲು ಮುನ್ನೆಚ್ಚರಿಕೆ ವಹಿಸಲಾಗಿದೆ. ಅಲ್ಲದೇ, ಹೆಚ್.ಪಿ. ಕಂಪನಿಯ ಅಧಿಕಾರಿಗಳು ಸೋರಿಕೆ ತಡೆಗಟ್ಟಲು ಪ್ರಯತ್ನ ನಡೆಸಿದ್ದಾರೆ.

ಬಂಟ್ವಾಳ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಸುಮಾರು 3 ಕಿಲೋಮೀಟರ್ ವ್ಯಾಪ್ತಿಯಲ್ಲಿ ಜನರನ್ನು ನಿಯಂತ್ರಿಸಲಾಗಿದೆ. ಅಲ್ಲದೇ, ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಸುಮಾರು ದೂರದವರೆಗೂ ಅನಿಲ ಹರಡಿದೆ ಎನ್ನಲಾಗಿದೆ

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...