alex Certify
ಕನ್ನಡ ದುನಿಯಾ       Mobile App
       

Kannada Duniya

ಜೆ.ಡಿ.ಎಸ್. ಅಭ್ಯರ್ಥಿಗೆ ಶಾಕ್! ಕಾಂಗ್ರೆಸ್ ಶಾಸಕನ ಪಾಲಾಯ್ತು ಟಿಕೆಟ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಕ್ಷೇತ್ರದ ಶಾಸಕ ಶ್ರೀನಿವಾಸ್ ಕಾಂಗ್ರೆಸ್ ಟಿಕೆಟ್ ವಂಚಿತರಾಗಿ ಜೆ.ಡಿ.ಎಸ್. ಸೇರಿದ್ದಾರೆ.

ಈ ಕ್ಷೇತ್ರದಲ್ಲಿ ಜೆ.ಡಿ.ಎಸ್. ಅಭ್ಯರ್ಥಿಯಾಗಿದ್ದ ಮಾಜಿ ಶಾಸಕ ಟಿ.ಹೆಚ್. ಶಿವಶಂಕರಪ್ಪ ಬದಲಿಗೆ ಶ್ರೀನಿವಾಸ್ ಗೆ ಬಿ ಫಾರಂ ಸಿಗಲಿದೆ. ಇದರಿಂದ ಆಕ್ರೋಶಗೊಂಡ ಶಿವಶಂಕರಪ್ಪ ಬೆಂಬಲಿಗರು ತರೀಕೆರೆಯ ಗಾಂಧಿ ವೃತ್ತದಲ್ಲಿ ಸಭೆ ಸೇರಿ ತೀವ್ರತರವಾಗಿ ಪ್ರತಿಭಟನೆ ನಡೆಸಿದ್ದಾರೆ.

ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಗಿದ್ದು, ವ್ಯಕ್ತಿಯೊಬ್ಬ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಣ್ಣಿಗೆ ಪೆಟ್ರೋಲ್ ಬಿದ್ದ ಕಾರಣ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಜೆ.ಡಿ.ಎಸ್. ನಾಯಕರಾದ ಹೆಚ್.ಡಿ. ದೇವೇಗೌಡ, ಹೆಚ್.ಡಿ. ಕುಮಾರಸ್ವಾಮಿ ಹಾಗೂ ಶಾಸಕ ಶ್ರೀನಿವಾಸ್ ವಿರುದ್ಧ ಶಿವಶಂಕರಪ್ಪ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶ್ರೀನಿವಾಸ್ ಅವರಿಂದ ಹಣ ಪಡೆದು ಕುಮಾರಸ್ವಾಮಿ ಪಕ್ಷದ ಅಭ್ಯರ್ಥಿಗೇ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಶಿವಶಂಕರಪ್ಪ ಅವರಿಗೆ ಒತ್ತಡ ಹಾಕಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...