alex Certify
ಕನ್ನಡ ದುನಿಯಾ       Mobile App
       

Kannada Duniya

ಅನುದಾನಿತ ಪ್ರೌಢಶಾಲೆ ಹಾಗೂ ಕಾಲೇಜು ಶಿಕ್ಷಕರಿಗೆ ಸರ್ಕಾರದ ‘ಶಾಕ್’

ಖಾಸಗಿ ಅನುದಾನಿತ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ.

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕಳೆದ ಐದು ವರ್ಷಗಳಿಂದ ಜಿಲ್ಲಾ ಸರಾಸರಿಗಿಂತ ಕಡಿಮೆ ಫಲಿತಾಂಶ ಪಡೆದ ಅನುದಾನಿತ ಪ್ರೌಢ ಶಾಲೆಗಳ ವಿರುದ್ಧ ಕ್ರಮಕ್ಕೆ ಮುಂದಾಗಿದ್ದು, ಅಂತಹ ಶಾಲೆಗಳ ವೇತನ ತಡೆ ಹಿಡಿಯುವಂತೆ ಸೂಚನೆ ನೀಡಲಾಗಿದೆ.

ಅನುದಾನಿತ ಪದವಿ ಪೂರ್ವ ಕಾಲೇಜುಗಳಿಗೂ ಈ ನಿಯಮ ಅನ್ವಯಿಸಲು ಮುಂದಾಗಿದ್ದು, ಇದರಿಂದಾಗಿ ಶಿಕ್ಷಕ ಸಮುದಾಯದಲ್ಲಿ ಕಳವಳ ಮೂಡಿದೆ.

ಶಿಕ್ಷಣ ಇಲಾಖೆಯ ಈ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿರುವ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ, ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶಿಕ್ಷಕರನ್ನು ಸಜ್ಜುಗೊಳಿಸಲಿ. ಅದನ್ನು ಬಿಟ್ಟು ಕಾಯ್ದೆ ಕಾನೂನಿನ ಮೂಲಕ ವೇತನ ತಡೆಹಿಡಿಯುವುದು ಸರಿಯಲ್ಲವೆಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...