alex Certify
ಕನ್ನಡ ದುನಿಯಾ       Mobile App
       

Kannada Duniya

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಬಿಗ್ ಶಾಕ್: ಮತ್ತೆ ಮುಂದಿನ ವರ್ಷಕ್ಕೆ ಮುಂದೂಡಿಕೆ

ಬಹು ಕಾಲದಿಂದ ನೆನೆಗುದಿಗೆ ಬಿದ್ದಿದ್ದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ಕೊನೆಗೂ ಆರಂಭವಾಯಿತೆಂದು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದ ಶಿಕ್ಷಕ ಸಮುದಾಯಕ್ಕೆ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದೆ. ಮತ್ತೊಮ್ಮೆ ವರ್ಗಾವಣೆ ಮುಂದೂಡಿಕೆಯಾಗಿದ್ದು, ಮುಂಬರುವ ಶೈಕ್ಷಣಿಕ ವರ್ಷದಲ್ಲಿ ನಡೆಸಲು ಸೂಚಿಸಲಾಗಿದೆ.

ರಾಜ್ಯದಲ್ಲಿ ಉಪ ಚುನಾವಣೆ ನಡೆಯುತ್ತಿದ್ದರೂ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಗೆ ಚುನಾವಣಾ ಆಯೋಗ ಸಮ್ಮತಿ ಸೂಚಿಸಿದ ಕಾರಣ, ಬಹುತೇಕ ಜಿಲ್ಲೆಗಳಲ್ಲಿ ಪ್ರಕ್ರಿಯೆ ಆರಂಭಿಸಲಾಗಿತ್ತು.

ಆದರೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕೌನ್ಸೆಲಿಂಗ್ ಗೆ ಸಮರ್ಪಕ ನೀತಿ ರೂಪಿಸದಿರುವುದು, ತಂತ್ರಾಂಶದಲ್ಲಿನ ಲೋಪದೋಷ ಮೊದಲಾದ ಕಾರಣಕ್ಕಾಗಿ ಹಲವು ಜಿಲ್ಲೆಗಳಲ್ಲಿ ಗೊಂದಲ ತಲೆದೋರಿತ್ತು.

ಇದರಿಂದಾಗಿ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಿದ್ದು, ಇದೀಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಮುಂದಿನ ಶೈಕ್ಷಣಿಕ ವರ್ಷದಿಂದ ವರ್ಗಾವಣೆ ಕೌನ್ಸೆಲಿಂಗ್ ನಡೆಸಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆಂದು ತಿಳಿದುಬಂದಿದೆ.

ಶೈಕ್ಷಣಿಕ ವರ್ಷ ಈಗಾಗಲೇ ಮುಗಿಯುತ್ತಾ ಬಂದಿರುವುದರಿಂದ ಈ ಸಂದರ್ಭದಲ್ಲಿ ವರ್ಗಾವಣೆ ಮುಂದುವರಿಸುವುದು ಬೇಡ ಎಂಬ ಅಭಿಪ್ರಾಯಕ್ಕೆ ಮುಖ್ಯಮಂತ್ರಿಗಳು ಬಂದಿದ್ದು, ಪರೀಕ್ಷೆಗಳೂ ಸಮೀಪಿಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸುವಂತೆ ಸೂಚಿಸಿದ್ದಾರೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...