alex Certify
ಕನ್ನಡ ದುನಿಯಾ       Mobile App
       

Kannada Duniya

ವರ್ಗಾವಣೆ ಬಯಸಿದ್ದ ಶಿಕ್ಷಕರಿಗೆ ನಿರಾಸೆ

ವಿಧಾನಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಕಾರಣಕ್ಕಾಗಿ ಮುಂದೂಡಲ್ಪಟ್ಟಿದ್ದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ಜೂನ್ 18ರಿಂದ ಆರಂಭವಾಗಬೇಕಿತ್ತು.

ಆದರೆ ಇದಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಒಂದು ವಾರದ ಮಟ್ಟಿಗೆ ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.

ವರ್ಗಾವಣೆ ಅಧಿಸೂಚನೆಗೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆ ತೆರವಿಗೆ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದ್ದು, ತಡೆಯಾಜ್ಞೆ ತೆರವುಗೊಂಡ ಬಳಿಕ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭವಾಗಲಿದೆ.

ಹೈಕೋರ್ಟ್ ನ ತಡೆಯಾಜ್ಞೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಿಕ್ಷಕರ ವರ್ಗಾವಣೆಗೆ ಮಾತ್ರ ಇರುವುದರಿಂದ ಪಿಯು ಉಪನ್ಯಾಸಕರ ವರ್ಗಾವಣೆ ಕೌನ್ಸೆಲಿಂಗ್ ನಿಗದಿಯಂತೆ ನಡೆಯಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...