alex Certify
ಕನ್ನಡ ದುನಿಯಾ       Mobile App
       

Kannada Duniya

ಶಿಕ್ಷಕರ ವರ್ಗಾವಣೆ: ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.

ಆದರೆ, ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಹೊಸ ಸರ್ಕಾರದ ಹೆಗಲಿಗೆ ವರ್ಗಾಯಿಸಲಾಗಿದೆ. ಸಚಿವರು ಶಿಕ್ಷಕರ ವರ್ಗಾವಣೆಯನ್ನು ರದ್ದುಪಡಿಸಿಲ್ಲ. ಆನ್ ಲೈನ್ ಮೂಲಕ ವರ್ಗಾವಣೆಗೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ಜನವರಿ 20 ರ ವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

ವರ್ಗಾವಣೆಗೊಂಡಿರುವ ಶಿಕ್ಷಕರ ಅಧಿಸೂಚನೆಯನ್ನು ಏಪ್ರಿಲ್ 10 ರ ಬಳಿಕ ಬಿಡುಗಡೆ ಮಾಡಲಾಗುವುದು. ಅರ್ಜಿ ಸ್ವೀಕರಿಸುವ ಪ್ರಕ್ರಿಯೆ ಮುಂದುವರೆಯಲಿದೆ. ಕೌನ್ಸಿಲಿಂಗ್ ಮೊದಲಾದ ಪ್ರಕ್ರಿಯೆಗಳು ಚುನಾವಣೆಯ ನಂತರದಲ್ಲಿ ನಡೆಯಲಿವೆ ಎಂದು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿ ತಿಳಿಸಿದ್ದಾರೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಮಾರ್ಚ್ 3 ರ ವೇಳೆಗೆ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳ್ಳಬೇಕಿತ್ತು. ಆದರೆ, ಅದು ಏಪ್ರಿಲ್ ವೇಳೆಗೆ ನಡೆಯುವ ಸಾಧ್ಯತೆ ಇದೆ. ಏಪ್ರಿಲ್ ನಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಾಗುವುದರಿಂದ ಮುಂದಿನ ಶೈಕ್ಷಣಿಕ ಸಾಲಿಗೆ ವರ್ಗಾವಣೆ ನಡೆಯಬಹುದು ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...