alex Certify
ಕನ್ನಡ ದುನಿಯಾ       Mobile App
       

Kannada Duniya

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮತ್ತೆ ನಿರಾಸೆ

ನೆನೆಗುದಿಗೆ ಬಿದ್ದಿರುವ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪದೇಪದೇ ಮುಂದೂಡಿಕೆಯಾಗುತ್ತಿರುವುದರಿಂದ ವರ್ಗಾವಣೆ ಬಯಸಿದ್ದ ಶಿಕ್ಷಕರಿಗೆ ನಿರಾಸೆಯಾಗಿದೆ. ಈ ಬಾರಿ ವರ್ಗಾವಣೆ ನಡೆಸಲು ಶಿಕ್ಷಣ ಇಲಾಖೆ ಸಿದ್ದವಾಗಿದ್ದು, ಆದರೆ ಶಿಕ್ಷಕ ಸಮೂಹದಿಂದ ಸಾವಿರಾರು ಆಕ್ಷೇಪಣೆ ಸಲ್ಲಿಕೆಯಾಗಿರುವುದರಿಂದ ವರ್ಗಾವಣೆ ಪ್ರಕ್ರಿಯೆ ಮತ್ತೆ ಮುಂದೂಡಿಕೆಯಾಗಿದೆ.

ಹೆಚ್ಚುವರಿ ಹಾಗೂ ಕಡ್ಡಾಯ ಶಿಕ್ಷಕರ ವರ್ಗಾವಣೆ ಸಂಬಂಧ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಲಾಗಿದ್ದು, ಇದಕ್ಕೆ ಶಿಕ್ಷಕ ಸಮೂಹದಿಂದ ಸಾವಿರಾರು ಆಕ್ಷೇಪಣೆಗಳು ಸಲ್ಲಿಕೆಯಾಗಿವೆ. ಇವುಗಳ ಪರಿಶೀಲನೆ ಮುಗಿದ ಬಳಿಕವೇ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ ಎನ್ನಲಾಗಿದೆ.

ಈಗ ಸಲ್ಲಿಕೆಯಾಗಿರುವ ಆಕ್ಷೇಪಣೆಗಳ ಪರಿಶೀಲನೆ ಗುರುವಾರದ ವೇಳೆಗೆ ಪೂರ್ಣಗೊಂಡರೆ ಅಕ್ಟೋಬರ್ 5 ರಿಂದ ವರ್ಗಾವಣೆ ಪ್ರಕ್ರಿಯೆ ಆರಂಭವಾಗಬಹುದು ಎಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ. 2017 ರಿಂದಲೂ ಶಿಕ್ಷಕರ ವರ್ಗಾವಣೆಯನ್ನು ಪದೇ ಪದೇ ಮುಂದೂಡಿಕೊಂಡು ಬರಲಾಗುತ್ತಿದ್ದು, ಇದು ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...