alex Certify
ಕನ್ನಡ ದುನಿಯಾ       Mobile App
       

Kannada Duniya

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ತಡೆ ಹಿಡಿಯಲಾಗಿದ್ದ ವರ್ಗಾವಣೆ ಪ್ರಕ್ರಿಯೆ ಇಂದಿನಿಂದ ಮತ್ತೆ ಆರಂಭವಾಗಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದ್ದು, 2007 ರ ಶಿಕ್ಷಣ ಕಾಯ್ದೆ ಪ್ರಕಾರ ಶಿಕ್ಷಕರ ವರ್ಗಾವಣೆ ನಡೆಯಬೇಕಿದೆ. ಆದರೆ ಕಡ್ಡಾಯ ಮತ್ತು ಹೆಚ್ಚುವರಿ ಶಿಕ್ಷಕರ ವರ್ಗಾವಣೆಗೆ ಕಾನೂನಾತ್ಮಕ ಸಮಸ್ಯೆ ತಲೆದೋರಿದ ಹಿನ್ನೆಲೆಯಲ್ಲಿ ವರ್ಗಾವಣೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿತ್ತು ಎಂದು ಹೇಳಿದ್ದಾರೆ.

ಇದೀಗ ಈ ಕುರಿತು ಕಾನೂನು ತಜ್ಞರ ಸಲಹೆ ಪಡೆದಿದ್ದು, ಶಿಕ್ಷಣ ಕಾಯ್ದೆ ಅನ್ವಯವೇ ಶಿಕ್ಷಕರ ವರ್ಗಾವಣೆ ಮಾಡುವಂತೆ ಸಲಹೆ ನೀಡಿದ್ದಾರೆ. ಈ ಕುರಿತು ಇದ್ದ ಗೊಂದಲಗಳಿಗೆ ಈಗ ತೆರೆ ಬಿದ್ದಿದ್ದು, ಅ. 1 ರೊಳಗೆ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...