alex Certify
ಕನ್ನಡ ದುನಿಯಾ       Mobile App
       

Kannada Duniya

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ‘ಸಿಹಿ ಸುದ್ದಿ’

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಿಕ್ಷಣ ಸಚಿವ ಎನ್. ಮಹೇಶ್ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇನ್ನು 15 ದಿನಗಳಲ್ಲಿ ವರ್ಗಾವಣೆ ಪ್ರಕ್ರಿಯೆ ಆರಂಭಿಸುವುದಾಗಿ ಸಚಿವರು ಹೇಳಿದ್ದಾರೆ.

ಬಿಜೆಪಿಯ ತಾರಾ ಅನುರಾಧ ಅವರು ವಿಧಾನಪರಿಷತ್ ನಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ವರ್ಗಾವಣೆಗೆ ತಡೆಯಾಜ್ಞೆ ಕೋರಿ ನ್ಯಾಯಾಲಯದಲ್ಲಿ ಒಟ್ಟು ಹತ್ತು ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ 3 ಇತ್ಯರ್ಥಗೊಂಡಿದ್ದು, ಇನ್ನು 7 ಪ್ರಕರಣಗಳು ಒಂದೆರಡು ದಿನಗಳಲ್ಲಿ ಇತ್ಯರ್ಥಗೊಳ್ಳಲಿವೆ ಎಂದು ತಿಳಿಸಿದ್ದಾರೆ.

ಕೋರಿಕೆ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಕನಿಷ್ಠ ಸೇವಾವಧಿಯನ್ನು ಐದು ವರ್ಷಗಳಿಂದ ಮೂರು ವರ್ಷಕ್ಕೆ ಇಳಿಸಲಾಗಿದೆ ಎಂದು ಹೇಳಿರುವ ಸಚಿವರು, ಕಡ್ಡಾಯ ವರ್ಗಾವಣೆಯಲ್ಲಿ ಕ್ಯಾನ್ಸರ್ ಮತ್ತು ಡಯಾಲಿಸಿಸ್ ಗೆ ಒಳಗಾಗಿರುವವರಿಗೆ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...