alex Certify
ಕನ್ನಡ ದುನಿಯಾ       Mobile App
       

Kannada Duniya

ನಟಿಯೊಂದಿಗೆ ಯುವಕ, ನೈತಿಕ ಪೊಲೀಸರಿಂದ ಹಲ್ಲೆ..?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದೆ. ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ತಮಿಳು ಚಿತ್ರ ನಟಿ ಹಾಗೂ ಅನ್ಯಕೋಮಿನ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ.

ಮೊದಲಿಗೆ ಸಂಘಟನೆಯೊಂದರ ಕಾರ್ಯಕರ್ತರು ಹಲ್ಲೆ ಮಾಡಿದ್ದು, ನಂತರದಲ್ಲಿ ಪೊಲೀಸರು ಕೂಡ ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದೆ.

ನಟಿ ಡಿಸೆಂಬರ್ 21 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಪೂಜೆ ಸಲ್ಲಿಸಲು ಬಂದಿದ್ದು, ಅವರೊಂದಿಗೆ ಅನ್ಯ ಕೋಮಿನ ಯುವಕ ಕೂಡ ಬಂದಿದ್ದಾನೆ. ಸಂಘಟನೆಯ ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ ನೆಪದಲ್ಲಿ ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ.

ಪೊಲೀಸ್ ಠಾಣೆಗೆ ತೆರಳಿದ ಸಂದರ್ಭದಲ್ಲಿಯೂ ಇಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ. ಪೊಲೀಸರು ಕೂಡ ಹಲ್ಲೆ ನಡೆಸಿದವರನ್ನು ಬೆಂಬಲಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಯುವಕ ತನ್ನ ಗೆಳೆಯನಷ್ಟೇ. ಆತನೊಂದಿಗೆ ಯಾವ ಸಂಬಂಧವನ್ನೂ ಹೊಂದಿಲ್ಲ. ಲವ್ ಜಿಹಾದ್ ನೆಪದಲ್ಲಿ ಹಲ್ಲೆ ಮಾಡಲಾಗಿದೆ ಎಂದು ನಟಿ ಘಟನೆಯ ಬಗ್ಗೆ ಜಾಲತಾಣದಲ್ಲಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...