alex Certify
ಕನ್ನಡ ದುನಿಯಾ       Mobile App
       

Kannada Duniya

ಬಂಧಿತ ಉಗ್ರರ ವಿಚಾರಣೆಯಲ್ಲಿ ಹೊರಬಿತ್ತು ಬೆಚ್ಚಿಬೀಳಿಸುವ ಸತ್ಯ

is mnjkl

ಬೆಂಗಳೂರು: ರಾಜ್ಯದ ವಿವಿಧ ಕಡೆಗಳಲ್ಲಿ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿರುವ ಶಂಕಿತ ಉಗ್ರರನ್ನು ಪ್ರತ್ಯೇಕ ಕೊಠಡಿಗಳಲ್ಲಿ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಎಟಿಎಸ್ ಹಾಗೂ ಪೊಲೀಸ್ ಸಿಬ್ಬಂದಿ ಮಹತ್ವದ ಮಾಹಿತಿ ಕಲೆ ಹಾಕಿದ್ದು, ಇಂದು ಅವರನ್ನೆಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

ಬಂಧಿತರು ಆನ್ ಲೈನ್ ನಲ್ಲಿಯೇ ನಿರಂತರ ಸಂಪರ್ಕದಲ್ಲಿದ್ದು, ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ತಮ್ಮ ಗುಪ್ತ ಕಾರ್ಯಾಚರಣೆಗೆ ಭೂಮಿಕೆ ಸಿದ್ಧಪಡಿಸುತ್ತಿದ್ದರು. ಫೇಸ್ ಬುಕ್, ಸ್ಕೈಪ್ ಮೂಲಕ ಇವರು ಚರ್ಚೆ ನಡೆಸಿರುವುದು ಗೊತ್ತಾಗಿದೆ. ಅಲ್ಲದೇ, ಜನವರಿ 26 ರಂದು ದೇಶದ ಹಲವು ಕಡೆಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದು, ಈ ಮೊದಲೇ ಬಂಧಿತರಾಗಿದ್ದ ಉಗ್ರನೊಬ್ಬ ನೀಡಿದ ಮಾಹಿತಿ ಆಧರಿಸಿ ಇವರ ಚಲನವಲನಗಳ ಮೇಲೆ ನಿಗಾ ವಹಿಸಲಾಗಿತ್ತು.

ರಾಜ್ಯದಲ್ಲಿ ಎಟಿಎಸ್ ನಡೆಸಿದ ಮಹತ್ವದ ಕಾರ್ಯಾಚರಣೆಗೆ ಕರ್ನಾಟಕ ಪೊಲೀಸ್ ಹಿರಿಯ ಅಧಿಕಾರಿಗಳು ಸಾಥ್ ನೀಡಿದ್ದು, ಬಂಧನದವರೆಗೆ ಕಾರ್ಯಾಚರಣೆಯ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗಿತ್ತು. ಇದೀಗ ಬಂಧಿತರ ವಿಚಾರಣೆ ಸಂದರ್ಭದಲ್ಲಿ ದೊರೆತ ಮಾಹಿತಿ ಅನ್ವಯ ತನಿಖೆ ಮುಂದುವರೆಸಲಾಗಿದೆ ಎಂದು ಹೇಳಲಾಗಿದೆ

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...