alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಚ್ಚಿ ಬೀಳಿಸುವ ಸುದ್ದಿ: ಬೆಂಗಳೂರಿನಲ್ಲಿ ದಾಳಿ ನಡೆಸ್ತಾರಂತೆ ಉಗ್ರರು

mirror-Image-graphic1

ದೇಶದಲ್ಲಿ ಉಗ್ರರ ಭೀತಿ ಹೆಚ್ಚುತ್ತಿದ್ದು, ಈ ನಡುವೆಯೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಉಗ್ರರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಬಯಲಾಗಿದೆ.

ಹೌದು. ಏಪ್ರಿಲ್‌ 17 ರಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉಗ್ರ ಕೃತ್ಯ ಎಸಗಲು ಭಯೋತ್ಪಾದಕರು ಈಗಾಗಲೇ ಯೋಜನೆ ರೂಪಿಸಿದ್ದು, ಮಾತ್ರವಲ್ಲ, ಇದೇ ಕಾರಣಕ್ಕೆ ಕೆಲವು ಉಗ್ರರು ರಾಜ್ಯವನ್ನು ಪ್ರವೇಶಿಸಿದ್ದಾರೆ ಎಂಬ ಮಾಹಿತಿಯನ್ನು ಕೇಂದ್ರ ಗುಪ್ತಚರ ಇಲಾಖೆ ನೀಡಿದ್ದು, ಬಿಗಿ ಭದ್ರತೆ ಕೈಗೊಳ್ಳುವಂತೆ ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಪೊಲೀಸರು ಈಗಾಗಲೇ ನಗರದೆಲ್ಲೆಡೆ ಕಟ್ಟೆಚ್ಚರ ವಹಿಸಿದ್ದು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ. ಅಲ್ಲದೇ ಉಗ್ರರು ದಾಳಿ ನಡೆಸಲು ಸಂಚು ರೂಪಿಸಿರುವ ಮಾಹಿತಿ ಆಧರಿಸಿ ರಾಷ್ಟ್ರೀಯ ತನಿಖಾ ತಂಡದ ಅಧಿಕಾರಿಗಳು ನಗರಕ್ಕೆ ಆಗಮಿಸಿದ್ದು, ಇಲ್ಲಿ ಅಡಗಿರುವ ಉಗ್ರರಿಗಾಗಿ ಶೋಧ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...