alex Certify
ಕನ್ನಡ ದುನಿಯಾ       Mobile App
       

Kannada Duniya

ಮದುವೆಗೆಂದು ತಂದಿರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ

robbery-89666ಮದುವೆಗೆಂದು ತಂದಿರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದ ದೀಪಾಂಜಲಿ ನಗರದಲ್ಲಿ ನಡೆದಿದೆ.

ದೀಪಾಂಜಲಿ ನಗರ ನಿವಾಸಿ ರಾಮಮೂರ್ತಿ ಎಂಬವರ ಮಗಳ ವಿವಾಹ ನಿಗದಿಯಾಗಿದ್ದು, ಈ ಹಿನ್ನಲೆಯಲ್ಲಿ ಚಿನ್ನಾಭರಣಗಳನ್ನು ಖರೀದಿಸಿ ಇಡಲಾಗಿತ್ತು. ಕಳೆದ ರಾತ್ರಿ ಮನೆಗೆ ನುಗ್ಗಿರುವ ಕಳ್ಳರು ಸುಮಾರು 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 50 ಸಾವಿರ ರೂ. ನಗದು ದೋಚಿಕೊಂಡು ಪರಾರಿಯಾಗಿದ್ದಾರೆಂದು ಹೇಳಲಾಗಿದೆ.

ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...