alex Certify
ಕನ್ನಡ ದುನಿಯಾ       Mobile App
       

Kannada Duniya

ಕೈಗೆ ಸಿಕ್ಕ ಕಳ್ಳರಿಗೆ ಗ್ರಾಮಸ್ಥರಿಂದ ಹಿಗ್ಗಾಮುಗ್ಗಾ ಗೂಸಾ

ಕಳ್ಳತನ ಮಾಡಲೆಂದು ಎರಡು ಕಾರುಗಳಲ್ಲಿ ಶಸ್ತ್ರಸಜ್ಜಿತರಾಗಿ ಬಂದಿದ್ದ ತಂಡವನ್ನು ಗ್ರಾಮಸ್ಥರು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ವಿಜಯನಗರ ಜಿಲ್ಲೆ, ಸಿಂದಗಿ ತಾಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ನಡೆದಿದೆ

ಕಳೆದ ಎರಡು ದಿನಗಳ ಹಿಂದೆ ಗ್ರಾಮದಲ್ಲಿ ಸರಣಿ ಕಳ್ಳತನ ನಡೆದಿತ್ತು ಎಂದು ಹೇಳಲಾಗಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಕಾವಲು ಕಾಯುತ್ತಿದ್ದರು. ಕಳೆದ ರಾತ್ರಿ ಎರಡು ಕಾರುಗಳು ಗ್ರಾಮಕ್ಕೆ ಬಂದಿದ್ದು, ಅದನ್ನು ತಡೆದು ನಿಲ್ಲಿಸಿದ ವೇಳೆ ಕಾರಿನಲ್ಲಿದ್ದವರು ಅನುಮಾನಾಸ್ಪದವಾಗಿ ವರ್ತಿಸಿದ್ದಾರೆ.

ಅಲ್ಲದೆ ಕೆಲವರು ತಪ್ಪಿಸಿಕೊಂಡು ಹೋಗಿದ್ದು, ಗ್ರಾಮಸ್ಥರ ಕೈಗೆ ನಾಲ್ವರು ಸಿಕ್ಕಿ ಬಿದ್ದಿದ್ದಾರೆ. ಇವರುಗಳನ್ನು ಕಟ್ಟಿ ಹಾಕಿದ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿ ದೇವರಹಿಪ್ಪರಗಿ ಠಾಣಾ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕಳ್ಳರು ಬಂದಿದ್ದ ಕಾರಿನಲ್ಲಿ ಶಸ್ತ್ರಾಸ್ತ್ರಗಳು ಕೂಡ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...