alex Certify
ಕನ್ನಡ ದುನಿಯಾ       Mobile App
       

Kannada Duniya

ಅಧಿಕಾರ ಹಂಚಿಕೆ ಕುರಿತಂತೆ ವೇಣುಗೋಪಾಲ್ ಹೇಳಿದ್ದಿಷ್ಟು

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ದೊರಕದ ಕಾರಣ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರುತ್ತಿದೆ.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಹಾಗೂ ಕಾಂಗ್ರೆಸ್ ನಿಂದ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಾರೆ.

ಅಧಿಕಾರ ಹಂಚಿಕೆ ಕುರಿತಂತೆ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಮಾತುಕತೆ ನಡೆದಿದ್ದು, ಜೆಡಿಎಸ್ ಗೆ ಮುಖ್ಯಮಂತ್ರಿ ಸ್ಥಾನ ಹಾಗೂ 12 ಸಚಿವ ಸ್ಥಾನ ಬಿಟ್ಟುಕೊಟ್ಟಿರುವ ಕಾಂಗ್ರೆಸ್, ಉಪ ಮುಖ್ಯಮಂತ್ರಿ ಹುದ್ದೆ ಸೇರಿದಂತೆ 20 ಸಚಿವ ಸ್ಥಾನಗಳನ್ನು ಪಡೆಯಲಿದೆ ಎಂದು ತಿಳಿದುಬಂದಿದೆ.

ವಿಧಾನಸಭಾ ಸಭಾಪತಿ ಸ್ಥಾನ ಕಾಂಗ್ರೆಸ್ಸಿಗೆ ಸಿಗಲಿದ್ದರೆ, ಉಪ ಸಭಾಪತಿ ಸ್ಥಾನ ಜೆಡಿಎಸ್ ಪಾಲಾಗಲಿದೆ. ಸ್ಥಾನ ಹಂಚಿಕೆ ಕುರಿತಂತೆ ಮಾಹಿತಿ ನೀಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಉಪಮುಖ್ಯಮಂತ್ರಿ ಸ್ಥಾನವನ್ನು ತಮ್ಮ ಜಾತಿಗೆ ನೀಡಬೇಕೆಂದು ಲಿಂಗಾಯಿತ ಶಾಸಕರಿಂದ ಯಾವುದೇ ಬೇಡಿಕೆ ಬಂದಿಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿಯೂ ಈ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದಿದ್ದಾರೆ. ವಿಧಾನಸಭಾ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ನ ರಮೇಶ್ ಕುಮಾರ್ ಆಯ್ಕೆಯಾಗಲಿದ್ದಾರೆಂದು ಮೂಲಗಳು ತಿಳಿಸಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...