alex Certify
ಕನ್ನಡ ದುನಿಯಾ       Mobile App
       

Kannada Duniya

ಕಂದಾಯ ಸಚಿವರ ಮಗನ ಮನೆಗೆ ಕನ್ನ

ಬೆಂಗಳೂರು: ಕಂದಾಯ ಸಚಿವ ಆರ್.ವಿ.ದೇಶಪಾಂಡೆಯವರ ಪುತ್ರನ ಮನೆಗೆ ಕನ್ನ ಹಾಕಿರುವ ಕಳ್ಳರು, ಭಾರೀ ಮೌಲ್ಯದ ವಿಗ್ರಹ-ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.

ದೇಶಪಾಂಡೆ ಅವರ ಪುತ್ರ ಪ್ರಶಾಂತ್ ದೇಶಪಾಂಡೆ ವಾಸವಿರುವ ಸದಾಶಿವನಗರದ 10 ನೇ ಮುಖ್ಯರಸ್ತೆಯಲ್ಲಿನ ಬಾಡಿಗೆ ಮನೆಯಲ್ಲಿ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. ಮನೆಯ ಓದುವ ಕೊಠಡಿಯಲ್ಲಿಟ್ಟಿದ್ದ ಲ್ಯಾಪ್‌ಟಾಪ್‌, ಸುಮಾರು ಅರ್ಧ ಕೆಜಿ ತೂಕದ ದೇವರ ಬೆಳ್ಳಿಯ ವಿಗ್ರಹ, ಎರಡು ಮೊಬೈಲ್‌ ಫೋನ್‌ಗಳನ್ನು ಕಳ್ಳತನ ಮಾಡಿದ್ದಾರೆ.

ಮನೆಯಲ್ಲಿ ಮೂರು ನಾಯಿಗಳನ್ನು ಸಾಕಲಾಗಿದೆ, ಭದ್ರತೆಗಾಗಿ ಓರ್ವ ಸೆಕ್ಯುರಿಟಿ ಗಾರ್ಡ್‌ ಕೂಡ ಇದ್ದಾರೆ, ಅಲ್ಲದೇ ಮನೆಯಲ್ಲಿ ಎಲ್ಲರೂ ಇರುವಾಗಲೇ ಈ ಕಳ್ಳತನ ನಡೆದಿದೆ. ಮನೆಯ ಹಿಂಭಾಗದಲ್ಲಿ ಕಟ್ಟಡ ನಿರ್ಮಾಣವಾಗುತ್ತಿದ್ದು, ಅಲ್ಲಿಂದ ಮನೆಯೊಳಗೆ ನುಗ್ಗಿ ಕಳ್ಳತನವೆಸಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ಈ ಸಂಬಂಧ ಸದಾಶಿವನಗರ ಠಾಣೆಯಲ್ಲಿ ಪ್ರಶಾಂತ್ ದೇಶಪಾಂದೆ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...