alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದ ಮೂವರು ಸಂಸದರ ರಾಜೀನಾಮೆ ಅಂಗೀಕಾರ

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿರುವ ಕಾರಣ ರಾಜ್ಯದ ಮೂವರು ಸಂಸದರು ತಮ್ಮ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದನ್ನು ಲೋಕಸಭಾ ಸ್ಪೀಕರ್ ಅಂಗೀಕರಿಸಿದ್ದಾರೆ.

ಶಿವಮೊಗ್ಗ ಸಂಸದ ಬಿ.ಎಸ್. ಯಡಿಯೂರಪ್ಪ, ಬಳ್ಳಾರಿ ಸಂಸದ ಶ್ರೀರಾಮುಲು ಹಾಗೂ ಮಂಡ್ಯ ಸಂಸದ ಪುಟ್ಟರಾಜು ತಮ್ಮ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಯಡಿಯೂರಪ್ಪ ಶಿಕಾರಿಪುರದಿಂದ, ಶ್ರೀರಾಮುಲು ಮೊಳಕಾಲ್ಮೂರು ಹಾಗೂ ಪುಟ್ಟರಾಜು ಮೇಲುಕೋಟೆ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಯಡಿಯೂರಪ್ಪ ಹಾಗೂ ಶ್ರೀರಾಮುಲು ಬಿಜೆಪಿ ಸಂಸದರಾಗಿದ್ದರೆ, ಸಿ. ಎಸ್. ಪುಟ್ಟರಾಜು ಜೆಡಿಎಸ್ ನಿಂದ ಸಂಸದರಾಗಿ ಆಯ್ಕೆಯಾಗಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...