alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರು-ಲಾರಿ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ಮೂವರ ದುರ್ಮರಣ

ಅನಂತಪುರಂ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅನಂತಪುರಂ ಬಳಿ ನಡೆದಿದೆ.

ಆಂಧ್ರಪ್ರದೇಶದಿಂದ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಪೆನುಕೊಂಡ ಬಳಿ ಕಾರು ತಮಿಳುನಾಡು ನೋಂದಣಿಯ ಲಾರಿಗೆ ಡಿಕ್ಕಿ ಹೊಡೆದಿದೆ. ಭಾನುವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರು ಬೆಂಗಳೂರಿನ ಜೆಪಿ ನಗರದ 2ನೇ ಹಂತದ ನಿವಾಸಿಗಳಾಗಿದ್ದು, ಅನಿಲ್, ಆದಿತ್ಯ ಹಾಗೂ ಕಮಲ ಎಂಬವರು ಸಾವನ್ನಪ್ಪಿದವರಾಗಿದ್ದಾರೆ. ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...