alex Certify
ಕನ್ನಡ ದುನಿಯಾ       Mobile App
       

Kannada Duniya

ಮರದ ಕೆಳಗೆ ನಿಂತಿದ್ದವರಿಗೆ ಬಡೀತು ಸಿಡಿಲು

kadur-sidil

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಭಾರೀ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಿದೆ.

ಕಡೂರು ತಾಲ್ಲೂಕಿನ ಕುರುಬರಹಳ್ಳಿಯಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಆಶಾ(30), ಅರುಣ್(25) ಮೃತಪಟ್ಟವರು.

ಆಡು ಮೇಯಿಸಲು ಹೋಗಿದ್ದ ಇವರು ಮಳೆಯಿಂದ ರಕ್ಷಣೆಗಾಗಿ ಮರದ ಕೆಳಗೆ ನಿಂತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ತಾಲ್ಲೂಕು ಆಡಳಿತದ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...