alex Certify
ಕನ್ನಡ ದುನಿಯಾ       Mobile App
       

Kannada Duniya

ಯಾದಗಿರಿ ಜಿಲ್ಲೆಯಲ್ಲಿ ಸಿಡಿಲಿಗೆ ನಾಲ್ವರು ಬಲಿ

ಯಾದಗಿರಿ: ಯಾದಗಿರಿ ಜಿಲ್ಲೆಯಲ್ಲಿ ಸಿಡಲು ಬಡಿದು ನಾಲ್ವರು ಮೃತಪಟ್ಟಿದ್ದಾರೆ. 2 ಪ್ರತ್ಯೇಕ ಘಟನೆಯಲ್ಲಿ ಒಬ್ಬ ವ್ಯಕ್ತಿ ಹಾಗೂ ಮೂವರು ಮಕ್ಕಳು ಸಿಡಿಲಿಗೆ ಬಲಿಯಾಗಿದ್ದಾರೆ.

ಸುರಪುರ ತಾಲ್ಲೂಕಿನ ಎಣ್ಣೆವಡಗೇರಾ ಗ್ರಾಮದಲ್ಲಿ 40 ವರ್ಷದ ನಾಗಪ್ಪ ಸಾವನ್ನಪ್ಪಿದ್ದಾರೆ. ಹೊಲದಲ್ಲಿ ಕೆಲಸ ಮಾಡುವಾಗ, ನಾಗಪ್ಪ ಅವರಿಗೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಸಂದರ್ಭದಲ್ಲಿ ಹೊಲದಲ್ಲಿದ್ದ ಮೂವರು ಮಹಿಳೆಯರು ಗಾಯಗೊಂಡಿದ್ದು, ಅವರನ್ನು ನಾಲತವಾಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಲಾಗಿದೆ.

ಯಾದಗಿರಿ ತಾಲ್ಲೂಕಿನ ಗೌಡಗೇರಾ ಬಳಿ ಸಿಡಿಲು ಬಡಿದು ಮೂವರು ಮಕ್ಕಳು ಮೃತಪಟ್ಟಿದ್ದಾರೆ. ನಾಗರಾಜ್, ಮೀನಾಕ್ಷಿ, ಕರೆಪ್ಪ ಎಂಬ ಮಕ್ಕಳು ಕುರಿ ಕಾಯಲು ಹೋಗಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್ ಹಾಗೂ ಸೈದಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...