alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರೀ ಸಿಡಿಲಿಗೆ ಸುಟ್ಟು ಭಸ್ಮವಾಯ್ತು ಮನೆ

ಚಿಕ್ಕಮಗಳೂರು: ಅರಬ್ಬೀ ಸಮುದ್ರದ ನೈರುತ್ಯ ಭಾಗದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ, ರಾಜ್ಯದ ವಿವಿಧೆಡೆ ಮಳೆಯಾಗಿದೆ. ಅಂತೆಯೇ ಮಲೆನಾಡು ಭಾಗದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಾಗಿದೆ.

ಎನ್.ಆರ್. ಪುರ ತಾಲ್ಲೂಕಿನ ಬಾಳೆಹೊನ್ನೂರಿನಲ್ಲಿ ಭಾರೀ ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಿದ್ದು, ಸಿಡಿಲು ಬಡಿದು ಬೆಂಕಿ ತಗುಲಿ ಮನೆಯೊಂದು ಸುಟ್ಟು ಹೋಗಿದೆ.

ಅವಿನಾಶ್ ಎಂಬುವವರ ಮನೆಗೆ ಸಿಡಿಲು ಬಡಿದು ಟಿವಿ ಸ್ಪೋಟಿಸಿದ್ದು, ಇದರಿಂದ ಹೊತ್ತಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿ, ಮನೆಯಲ್ಲಿದ್ದ ವಸ್ತುಗಳೆಲ್ಲಾ ಸುಟ್ಟುಹೋಗಿ ಅಪಾರ ನಷ್ಟ ಉಂಟಾಗಿದೆ. ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಬೆಂಕಿ ತಗುಲಿದ ಕೂಡಲೇ ಮನೆಯಲ್ಲಿದ್ದವರು ಪಾರಾಗಿದ್ದಾರೆ.

ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಅಧಿಕಾರಿಗಳು ತೆರಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...