alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೆ ಮಳೆ ಆರಂಭ: ನದಿಗಳ ನೀರಿನ ಮಟ್ಟ ಏರಿಕೆ

ಶಿವಮೊಗ್ಗ: ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆ ಜಿಲ್ಲೆಯ ವಿವಿಧೆಡೆ ಧಾರಾಕಾರವಾಗಿ ಸುರಿಯತೊಡಗಿದೆ. ಪರಿಣಾಮ ತುಂಗಭದ್ರಾ, ಶರಾವತಿ ಸೇರಿದಂತೆ ಬಹುತೇಕ ಎಲ್ಲ ನದಿಗಳ ಹರಿವು ಹೆಚ್ಚಳಗೊಂಡಿದೆ.

ಘಟ್ಟ ಪ್ರದೇಶ ಹಾಗೂ ಮಲೆನಾಡಿನ ಭಾಗದಲ್ಲಿ ಭಾರೀ ಮಳೆಯಿಂದಾಗಿ ನದಿಗಳ ಹರಿವು ಏರಿಕೆಗೊಂಡಿದ್ದು, ಪರಿಣಾಮ ಅಣೆಕಟ್ಟುಗಳಲ್ಲಿ ನೀರಿನ ಒಳ ಹರಿವು ಹೆಚ್ಚಾಗತೊಡಗಿದೆ.
ಈಗಾಗಲೇ ಗಾಜನೂರಿನ ತುಂಗಾ ಹಾಗೂ ಬಿಆರ್ಪಿಯಲ್ಲಿ ಭದ್ರಾ ಡ್ಯಾಂ ಭರ್ತಿಯಾಗಿದ್ದು, ಡ್ಯಾಂನಿಂದ ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ.

ಭದ್ರಾ ಜಲಾನಯನ ವ್ಯಾಪ್ತಿಯಲ್ಲಿ ಮಳೆಯಾಗುತ್ತಿದ್ದು, ಭದ್ರಾ ನದಿಯ ಒಳ ಹರಿವು 22,678 ಕ್ಯೂಸೆಕ್ ಗೆ ಏರಿಕೆಯಾಗಿದೆ. 19,657 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

ತುಂಗಾ ನದಿಯಲ್ಲೂ ಹರಿವು ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ 39,325 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಡ್ಯಾಂನಿಂದ 37,162 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಲಿಂಗನಮಕ್ಕಿ ಜಲಾನಯನ ವ್ಯಾಪ್ತಿಯಲ್ಲೂ ವ್ಯಾಪಕ ಮಳೆಯಾಗುತ್ತಿದ್ದು, ಗರಿಷ್ಟ 1819 ಅಡಿ ಸಾಮಥ್ರ್ಯದ ಡ್ಯಾಂ ನಲ್ಲಿ ಹಾಲಿ 1809.95ರಷ್ಟು ನೀರು ಸಂಗ್ರಹವಾಗಿದೆ. 22,100 ಕ್ಯೂಸೆಕ್ ಒಳಹರಿವು ದಾಖಲಾಗಿದೆ. 2629.76 ಕ್ಯೂಸೆಕ್ ನೀರನ್ನು ಹೊರಹರಿಸಲಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...