alex Certify
ಕನ್ನಡ ದುನಿಯಾ       Mobile App
       

Kannada Duniya

ತಿಪ್ಪಗೊಂಡನಹಳ್ಳಿ ಡ್ಯಾಂ ಬಳಿ ಹೆಜ್ಜೇನು ದಾಳಿ

lakeದುನಿಯಾ ವಿಜಯ್ ಅಭಿನಯದ ‘ಮಾಸ್ತಿಗುಡಿ’ ಚಿತ್ರದ ಸಾಹಸ ದೃಶ್ಯವನ್ನು ಸೋಮವಾರದಂದು ತಿಪ್ಪಗೊಂಡನಹಳ್ಳಿ ಜಲಾಶಯದ ಬಳಿ ಚಿತ್ರೀಕರಿಸುತ್ತಿದ್ದ ವೇಳೆ ಹೆಲಿಕಾಪ್ಟರ್ ನಿಂದ ಹಾರಿದ್ದ ಸಾಹಸ ಕಲಾವಿದರಾದ ಉದಯ್ ಮತ್ತು ಅನಿಲ್ ನೀರಿನಲ್ಲಿ ಮುಳುಗಿದ್ದು, ಇವರ ಹಿಂದೆ ಹಾರಿದ್ದ ವಿಜಯ್ ಅವರನ್ನು ರಕ್ಷಿಸಲಾಗಿತ್ತು.

ಉದಯ್ ಮತ್ತು ಅನಿಲ್ ಅವರ ದೇಹಗಳಿಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ರಾಜ್ಯ ವಿಪತ್ತು ನಿರ್ವಹಣಾ ತಂಡ, ಅಗ್ನಿಶಾಮಕ ಮತ್ತು ತುರ್ತು ಸೇವೆ ಸಿಬ್ಬಂದಿ, ಪೊಲೀಸರು ನಿನ್ನೆ ತಡರಾತ್ರಿವರೆಗೂ ಶೋಧ ಕಾರ್ಯ ನಡೆಸಿದ್ದು, ಇಂದು ಕೂಡಾ ಕಾರ್ಯಾಚರಣೆ ಮುಂದುವರೆದಿದೆ.

ಈ ಮಧ್ಯೆ ಘಟನಾ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಸಾರ್ವಜನಿಕರು ಜಮಾಯಿಸಿದ್ದು, ಈ ವೇಳೆ ಹೆಜ್ಜೇನು ದಾಳಿ ನಡೆಸಿದೆ. ಕಿಡಿಗೇಡಿಗಳ್ಯಾರು ಜೇನುಗೂಡಿಗೆ ಕಲ್ಲು ಎಸೆದಿರಬಹುದೆಂದು ಹೇಳಲಾಗಿದ್ದು, ಹೆಜ್ಜೇನು ದಾಳಿ ನಡೆಯುತ್ತಿದ್ದಂತೆಯೇ ಜನ ದಿಕ್ಕಾಪಾಲಾಗಿ ಓಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...