alex Certify
ಕನ್ನಡ ದುನಿಯಾ       Mobile App
       

Kannada Duniya

ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡಲು ಹೈಕೋರ್ಟ್ ನಕಾರ

ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡಲು ನಕಾರ ವ್ಯಕ್ತಪಡಿಸಿದೆ.

ರಾಜ್ಯ ಸರ್ಕಾರದ ವತಿಯಿಂದ ಟಿಪ್ಪು ಜಯಂತಿಯನ್ನು ಇದೇ ತಿಂಗಳ 10 ರಂದು ರಾಜ್ಯದಾದ್ಯಂತ ಆಚರಿಸಲಾಗುತ್ತಿದ್ದು, ಹೈಕೋರ್ಟ್ ನ ಇಂದಿನ ತೀರ್ಪಿನಿಂದಾಗಿ ಟಿಪ್ಪು ಜಯಂತಿ ಆಚರಣೆಗೆ ಹಾದಿ ಸುಗಮವಾಗಿದೆ.

ಟಿಪ್ಪು ಜಯಂತಿ ಆಚರಣೆ ಕಾನೂನಿಗೆ ವಿರುದ್ದವಿದ್ದರೆ ಮಾತ್ರ ನ್ಯಾಯಾಲಯ ತಡೆ ನೀಡಬಹುದು. ಆದರೆ ಈ ಪ್ರಕರಣದಲ್ಲಿ ತಡೆ ನೀಡಲು ಸಾಧ್ಯವಿಲ್ಲವೆಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...