alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ವಾತಂತ್ರ್ಯ ವೀರ ಟಿಪ್ಪು ಹೆಸರಿನಲ್ಲಿ ಕೋಟಿ ರೂಪಾಯಿ ಪ್ರಶಸ್ತಿ ನೀಡುವಂತೆ ಒತ್ತಾಯಿಸಿದ ವಾಟಾಳ್

ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸುತ್ತಿರುವ ಕುರಿತಂತೆ ಪರ-ವಿರೋಧದ ಚರ್ಚೆಗಳು ನಡೆದಿರುವ ಮಧ್ಯೆ, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಟಿಪ್ಪು ಸುಲ್ತಾನನನ್ನು ಹಾಡಿ ಹೊಗಳಿದ್ದಾರೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿರುವ ಟಿಪ್ಪು ಸುಲ್ತಾನ್ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಅಪ್ರತಿಮ ದೇಶಪ್ರೇಮಿಯಾಗಿದ್ದ ಟಿಪ್ಪು ಸುಲ್ತಾನ್, ಬ್ರಿಟಿಷರ ನಿದ್ದೆಗೆಡಿಸಿದ್ದ. ಇಂತಹ ವೀರಯೋಧನ ಜನ್ಮ ದಿನವನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕೆಂದು ಹೇಳಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರನಾಗಿರುವ ಟಿಪ್ಪು ಹೆಸರಿನಲ್ಲಿ ಒಂದು ಕೋಟಿ ರೂಪಾಯಿ ಮೊತ್ತದ ಪ್ರಶಸ್ತಿಯನ್ನು ಮೀಸಲಿಟ್ಟು, ಅದನ್ನು ಜಾತ್ಯಾತೀತವಾಗಿ ಹೋರಾಟ ಮಾಡುವವರನ್ನು ಗುರುತಿಸಿ ನೀಡಬೇಕೆಂದು ವಾಟಾಳ್ ನಾಗರಾಜ್ ಹೇಳಿದ್ದಾರೆ. ಅಲ್ಲದೇ, ಸಂಸತ್ ಭವನದ ಮುಂದೆ ಟಿಪ್ಪು ಸುಲ್ತಾನ್ ಪ್ರತಿಮೆ ಸ್ಥಾಪನೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...