alex Certify
ಕನ್ನಡ ದುನಿಯಾ       Mobile App
       

Kannada Duniya

ಕಂಡಕಂಡಲ್ಲಿ ಸುಸು ಮಾಡಿದವರಿಗೆ ಆಗಿದ್ದೇನು?

urinal 55

ಕಾರ್ಕಳ: ನೇಚರ್ ಕಾಲ್ ಗೆ ಅರ್ಜೆಂಟ್ ಆದರೆ ತಡೆಯಲು ಆಗಲ್ಲ. ಅದರಲ್ಲಿಯೂ ಕೆಲವರಂತೂ ಎಲ್ಲಿ ಜಾಗ ಸಿಗುತ್ತದೆಯೋ ಅಲ್ಲಿಯೇ ಮೂತ್ರ ವಿಸರ್ಜನೆ ಮಾಡುತ್ತಾರೆ. ಹೀಗೆ ಕಂಡಕಂಡಲ್ಲಿ ಮೂತ್ರವಿಸರ್ಜನೆ ಮಾಡಿದವರಿಗೆ ದಂಡ ವಿಧಿಸಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು.ಇಲ್ಲಿ ಮೂತ್ರವಿಸರ್ಜನೆ ಮಾಡಬಾರದೆಂದು ಸೂಚನಾ ಫಲಕ ಹಾಕಿದ್ದರೂ ಅಲ್ಲಿಯೇ ಮೂತ್ರ ವಿಸರ್ಜನೆ ಮಾಡಿದ್ದ 10 ಮಂದಿಗೆ ದಂಡ ವಿಧಿಸಲಾಗಿದೆ. ಕಾರ್ಕಳದ ಹಳೆ ಬಸ್ ನಿಲ್ದಾಣದ ಬಳಿ ಇದ್ದ ಹಳೆಯ ಶೌಚಾಲಯವನ್ನು ತೆರವುಗೊಳಿಸಲಾಗಿದ್ದು, ಹೊಸ ಬಸ್ ನಿಲ್ದಾಣದಲ್ಲಿ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ. ಇದನ್ನು ಬಳಸಿಕೊಳ್ಳದೇ ಕೆಲವರು ಹಳೆ ಬಸ್ ನಿಲ್ದಾಣದಲ್ಲಿ ಬಯಲಿನಲ್ಲಿಯೇ ಮೂತ್ರ ವಿಸರ್ಜನೆ ಮಾಡುತ್ತಿದ್ದರು.

ಬಯಲಿನಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಕಾರಣ ಇಲ್ಲಿ ಓಡಾಡುವವರಿಗೆ ದುರ್ನಾತ ಬೀರುತ್ತಿತ್ತು. ಇದನ್ನು ತಡೆಯಲು ಪುರಸಭೆ ಅಧಿಕಾರಿಗಳು ಬಯಲಿನಲ್ಲಿಯೇ ಮೂತ್ರ ವಿಸರ್ಜನೆ ಮಾಡಿದ ಸುಮಾರು 10 ಮಂದಿಗೆ ತಲಾ 100 ರೂ. ದಂಡ ಹಾಕಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...