alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಹುಬಲಿ: ಮುಗಿಲುಮುಟ್ಟಿದ ಸಂಭ್ರಮ -ಹೆಲಿಕಾಪ್ಟರ್ ಗೂ ಮುಗಿಬಿದ್ದ ಜನ

ಹಾಸನ: ಶ್ರವಣಬೆಳಗೊಳದ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವದಲ್ಲಿ ಭಕ್ತರು, ಪ್ರವಾಸಿಗರ ಸಂಭ್ರಮ ಮುಗಿಲು ಮುಟ್ಟಿದೆ.

ಮಹಾಮಸ್ತಕಾಭಿಷೇಕ ಮಹೋತ್ಸವದ ವಿಶೇಷವಾಗಿ ಹೆಲಿ ಟೂರಿಸಂ ಮೂಲಕ ಹೆಲಿಕಾಪ್ಟರ್ ನಲ್ಲಿ ಶ್ರವಣಬೆಳಗೊಳದ ದೃಶ್ಯಗಳ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೆಲಿ ಟೂರಿಸಂ ಆರಂಭವಾದ 3 ದಿನದಲ್ಲಿ 17,38,800 ರೂ. ಸಂಗ್ರಹವಾಗಿದೆ.

ಹೆಲಿಕಾಪ್ಟರ್ ನಲ್ಲಿ ಮಹಾಮಸ್ತಕಾಭಿಷೇಕ ಹಾಗೂ ಶ್ರವಣಬೆಳಗೊಳದ ದೃಶ್ಯಗಳ ವೀಕ್ಷಣೆಗೆ ಅವಕಾಶ ಮಾಡಿದ್ದು, ಒಬ್ಬರಿಗೆ 2100 ರೂ. ನಿಗದಿಪಡಿಸಲಾಗಿದೆ. ಹೆಲಿ ಟೂರಿಸಂ ಆರಂಭದ ದಿನ 4,78,800 ರೂ., 2 ನೇ ದಿನ 5,67,700 ರೂ., 3 ನೇ ದಿನ 6,93,000 ರೂ. ಸಂಗ್ರಹವಾಗಿದೆ.

ಹೆಲಿಕಾಪ್ಟರ್ ನಲ್ಲಿ ಮಹಾಮಸ್ತಕಾಭಿಷೇಕದ ದೃಶ್ಯಗಳನ್ನು ಕಣ್ತುಂಬಿಕೊಂಡ ಪ್ರವಾಸಿಗರು, ಭಕ್ತರು ಸಂಭ್ರಮಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...