alex Certify
ಕನ್ನಡ ದುನಿಯಾ       Mobile App
       

Kannada Duniya

‘ಬಾಹುಬಲಿ’ ಮಹೋತ್ಸವದಲ್ಲಿ ಮತ್ತೊಂದು ವಿಶೇಷ ಆಕರ್ಷಣೆ

ಹಾಸನ: ಶ್ರವಣಬೆಳಗೊಳದ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ದೇಶ, ವಿದೇಶಗಳಿಂದ ಅಪಾರ ಸಂಖ್ಯೆಯ ಭಕ್ತರು, ಪ್ರವಾಸಿಗರು ಭೇಟಿ ನೀಡುತ್ತಾರೆ.

ಹೀಗೆ ಬರುವ ಪ್ರವಾಸಿಗರಿಗೆ ದೋಣಿ ವಿಹಾರ, ಜಲಕ್ರೀಡೆ ಆರಂಭಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ 50 ಲಕ್ಷ ರೂ. ವೆಚ್ಚದಲ್ಲಿ ಶ್ರವಣಬೆಳಗೊಳದ ಜನಿವಾರ ಕೆರೆಯಲ್ಲಿ ದೋಣಿ ವಿಹಾರ, ಜಲಕ್ರೀಡೆ ಆರಂಭಿಸಿದ್ದು, ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲಾಗಿದೆ. ಇದರೊಂದಿಗೆ ಮೋಟರ್ ಬೈಕ್ ನಲ್ಲಿ ಪ್ರವಾಸಿ ಸ್ಥಳಗಳ ವೀಕ್ಷಣೆಗೆ ಅನುಕೂಲವಾಗುವಂತೆ ಬೈಕ್ ಸವಾರಿಗೆ ಅವಕಾಶ ಮಾಡಿಕೊಡಲಾಗಿದೆ. ಮಹಾಮಸ್ತಕಾಭಿಷೇಕಕ್ಕೆ ಬರುವವರು ದೋಣಿಯಲ್ಲಿ ವಿಹರಿಸಿ, ಬೈಕ್ ನಲ್ಲಿ ಸುತ್ತಾಡಬಹುದಾಗಿದೆ.

ಇದರೊಂದಿಗೆ ಮತ್ತೊಂದು ವಿಶೇಷ ಆಕರ್ಷಣೆಯಾಗಿ ಹೆಲಿಟೂರಿಸಂ ಆರಂಭಿಸಲಾಗಿದೆ. ಹೆಲಿಕಾಪ್ಟರ್ ನಲ್ಲಿ ಶ್ರವಣಬೆಳಗೊಳದ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಶ್ರವಣಬೆಳಗೊಳದ ವಿಂಧ್ಯಗಿರಿ, ಚಂದ್ರಗಿರಿ ಬೆಟ್ಟಗಳು, ಬಾಹುಬಲಿ ಮಹಾಮಸ್ತಕಾಭಿಷೇಕ, ಬಸದಿಗಳು, ಗುಹೆಗಳು ಸೇರಿದಂತೆ ಶ್ರವಣಬೆಳಗೊಳದ ನೋಟವನ್ನು ಕಣ್ತುಂಬಿಕೊಳ್ಳಬಹುದಾಗಿದೆ.

ಒಬ್ಬರಿಗೆ 2,100 ರೂ. ದರ ನಿಗದಿ ಮಾಡಲಾಗಿದೆ. ಬುಧವಾರದಿಂದ ಹೆಲಿಟೂರಿಸಂ ಆರಂಭವಾಗಿದ್ದು, ಹಲವಾರು ಮಂದಿ ಹೆಲಿಕಾಪ್ಟರ್ ಮೂಲಕ ಬಾಹುಬಲಿ ಮಹಾಮಸ್ತಕಾಭಿಷೇಕದ ದೃಶ್ಯ ವೈಭವವನ್ನು ಕಣ್ತುಂಬಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...