
ತುಮಕೂರು: ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳಿಬ್ಬರು ನೀರು ಪಾಲಾದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಎಲೆರಾಂಪುರದಲ್ಲಿ ನಡೆದಿದೆ.
ಇಬ್ಬರೂ ಬೆಂಗಳೂರು ವಿಜಯನಗರದ ವಾಸವಿ ವಿದ್ಯಾಪೀಠ ಕಾಲೇಜು ವಿದ್ಯಾರ್ಥಿಗಳಾಗಿದ್ದು, ದೇವರಾಯನದುರ್ಗ ಪ್ರವಾಸಕ್ಕೆ ಬಂದಿದ್ದರು. ಎಲೆರಾಂಪುರ ಕೆರೆಯಲ್ಲಿ ಇಳಿದ ಸಂದರ್ಭದಲ್ಲಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ. ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.