alex Certify
ಕನ್ನಡ ದುನಿಯಾ       Mobile App
       

Kannada Duniya

ಟ್ರಾಕ್ಟರ್ ಚಲಾಯಿಸಿದ ಮಕ್ಕಳಿಂದ ಅಪಘಾತ

bdvt-vd-accಮನೆ ಮುಂದೆ ನಿಲ್ಲಿಸಿದ್ದ ಟ್ರಾಕ್ಟರ್ ನ್ನು ಮಕ್ಕಳು ಚಲಾಯಿಸಲು ಮುಂದಾದ ವೇಳೆ ಅದು ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಂಜಗಿ ಗ್ರಾಮದಲ್ಲಿ ನಡೆದಿದೆ.

ಹಂಜಗಿ ಗ್ರಾಮದ ತೋಟದ ಮನೆಯಲ್ಲಿ ಟ್ರಾಕ್ಟರ್ ನಿಲ್ಲಿಸಿದ್ದು, ಈ ವೇಳೆ ಅಲ್ಲಿಯೇ ಆಟವಾಡಿಕೊಂಡಿದ್ದ ಮಕ್ಕಳು ಅದನ್ನು ಚಲಾಯಿಸಿದ್ದಾರೆ. ಟ್ರಾಕ್ಟರ್ ಗೋಡೆಗೆ ಡಿಕ್ಕಿ ಹೊಡೆದಿದ್ದು, ಇದರಿಂದಾಗಿ 3 ವರ್ಷದ ಶಬನಂ ಕಣಬಿ ಹಾಗೂ 5 ವರ್ಷದ ಅಬುತಲಾಬ್ ಹೊನ್ನಟಗಿ ಸಾವನ್ನಪ್ಪಿದ್ದಾರೆ.

ಲಾಲಸಾಬ್, ಫಾತಿಮಾ ಬಾಯಿ ಹಾಗೂ ಫಾಯಿಯಾ ಎಂಬ ಮೂರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಅವರುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...