alex Certify
ಕನ್ನಡ ದುನಿಯಾ       Mobile App
       

Kannada Duniya

2 ಪ್ರತ್ಯೇಕ ಅಪಘಾತದಲ್ಲಿ ನಾಲ್ವರ ದುರ್ಮರಣ

ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ನಡೆದ 2 ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಲಿಂಗಸಗೂರು ತಾಲ್ಲೂಕು ಮೆದಕಿನಾಳ ಬಳಿ ಟ್ರ್ಯಾಕ್ಟರ್ ಹಾಗೂ ಬಸ್ ನಡುವೆ ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.

ಮಲ್ಲಮ್ಮ, ಹುಲಿಗೆಮ್ಮ ಮೃತಪಟ್ಟವರೆಂದು ಗುರುತಿಸಲಾಗಿದೆ. 15 ಮಂದಿಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.

ಸಿಂಧನೂರಿನಿಂದ ತೆರಳುತ್ತಿದ್ದ ಟ್ರ್ಯಾಕ್ಟರ್, ಎದುರಿನಿಂದ ಬಂದ ಈಶಾನ್ಯ ಸಾರಿಗೆ ಬಸ್ ವೇಗವಾಗಿದ್ದ ಕಾರಣ ನಿಯಂತ್ರಣ ತಪ್ಪಿ ಮುಖಾಮುಖಿ ಡಿಕ್ಕಿಯಾಗಿವೆ. ಮಸ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತೊಂದು ಘಟನೆ ಸಿಂಧನೂರು ತಾಲ್ಲೂಕಿನ ಸಾಲಗುಂದ ಬಳಿ ನಡೆದಿದೆ. ಟ್ರ್ಯಾಕ್ಟರ್ ಪಲ್ಟಿಯಾಗಿ ಹನುಮಂತಮ್ಮ, ಅಂಬಮ್ಮ ಎಂಬುವವರು ಮೃತಪಟ್ಟಿದ್ದಾರೆ. ಸಿಂಧನೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...