alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರೇ ಹುಷಾರ್…!

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರೇ ಹುಷಾರ್. ಇನ್ಮುಂದೆ ಎಚ್ಚರಿಕೆಯಿಂದ ವಾಹನವನ್ನು ಚಲಾಯಿಸಿ. ಒಂದು ವೇಳೆ ನೀವು ನಿಯಮ ಉಲ್ಲಂಘಿಸಿದಲ್ಲಿ ಬಚಾವ್ ಆಗಲು ಸಾಧ್ಯವೇ ಇಲ್ಲ. ಸ್ಪಾಟ್ ನಲ್ಲೇ ಬೀಳುತ್ತೆ ಫೈನ್.

ಟ್ರಾಫಿಕ್ ಪೊಲೀಸರು ವಾಹನಗಳ ನಂಬರ್ ಬರೆದುಕೊಂಡು ಬಳಿಕ ಎಸ್.ಐ., ಎ.ಎಸ್.ಐ. ಗಳು ಕೇಸ್ ಹಾಕುತ್ತಿದ್ದರು. ಬಳಿಕ ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಾಗಿ ದಂಡದ ಚಲನ್ ಮನೆಗೆ ಕಳಿಸಲಾಗ್ತಿತ್ತು.

ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ಜಾಸ್ತಿಯಾಗಿರುವುದರಿಂದ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಪ್ಲಾನ್ ಮಾಡಿದೆ. ಸ್ಪಾಟ್ ನಲ್ಲೇ ಫೈನ್ ಹಾಕುವ ವ್ಯವಸ್ಥೆಯನ್ನು ಜಾರಿಗೆ ತರಲು ಪೊಲೀಸ್ ಇಲಾಖೆ ಮುಂದಾಗಿದೆ.

ಇದಕ್ಕಾಗಿ ಸಂಚಾರ ಪೊಲೀಸರಿಗೆ 250 ಸ್ಮಾರ್ಟ್ ಫೋನ್ ಗಳನ್ನು ವಿತರಿಸಲಾಗುತ್ತದೆ. ಸಂಚಾರ ನಿಯಮ ಉಲ್ಲಂಘಿಸುವವರಿಗೆ ಸ್ಪಾಟ್ ನಲ್ಲೇ ಫೈನ್ ಹಾಕುವ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...