alex Certify
ಕನ್ನಡ ದುನಿಯಾ       Mobile App
       

Kannada Duniya

ಚಲಿಸುತ್ತಿದ್ದ ರೈಲಿಗೆ ಸಿಲುಕಿ ಮೂವರು ಸ್ಥಳದಲ್ಲೇ ಸಾವು

train-raic

ರಾಯಚೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ರಾಯಚೂರಿನ ಜಿಲ್ಲಾ ಕ್ರೀಡಾಂಗಣ ಹಿಂಭಾಗದಲ್ಲಿ ನಡೆದಿದೆ.

ವೀರೇಶ್(20), ಏಸು(18), ಆಂಜನೇಯ(20) ಮೃತಪಟ್ಟವರು. ಕುಲಸುಂಬಿ ಕಾಲೋನಿಯ ನಿವಾಸಿಗಳಾಗಿರುವ ಈ ಮೂವರು ರೈಲ್ವೇ ಹಳಿ ದಾಟುವಾಗ ರೈಲಿಗೆ ಸಿಲುಕಿದ್ದಾರೆ.

ಯಾದಗಿರಿ –ಬೆಂಗಳೂರು ನಡುವೆ ಸಂಚರಿಸುವ ಲಿಂಕ್ ಎಕ್ಸ್ ಪ್ರೆಸ್ ರೈಲು ವೇಗವಾಗಿ ಬಂದಿದ್ದು, ಇದನ್ನು ಗಮನಿಸದೆ ಹಳಿ ದಾಟಲು ಮುಂದಾಗಿದ್ದೇ ದುರಂತಕ್ಕೆ ಕಾರಣವೆನ್ನಲಾಗಿದೆ.

ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...