alex Certify
ಕನ್ನಡ ದುನಿಯಾ       Mobile App
       

Kannada Duniya

ರೈಲು ಚಲಿಸುತ್ತಿದ್ದ ವೇಳೆಯೇ ರೈಲ್ವೆ ಟ್ರ್ಯಾಕ್ ಅಡಿ ಕುಸಿದ ಭೂಮಿ

ಚಿಕ್ಕಮಗಳೂರು: ರೈಲು ಚಲಿಸುತ್ತಿದ್ದ ವೇಳೆಯೇ ರೈಲ್ವೆ ಹಳಿ ಅಡಿಯಲ್ಲಿ ಭೂ ಕುಸಿತ ಸಂಭವಿಸಿದ್ದು, ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಇಲ್ಲಿನ ತರೀಕೆರೆಯ ಹಳೆಯೂರು ಸಮೀಪ ರೈಲು ಸಂಚರಿಸುವ ವೇಳೆಯೇ ಭೂಮಿ ಹತ್ತು ಅಡಿ ಕುಸಿತಗೊಂಡಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಆದರೆ ಭೂ ಕುಸಿತದಿಂದಾಗಿ ರೈಲಿನಲ್ಲಿದ್ದ ಪ್ರಯಾಣಿಕರು ಕೆಲ ಕಾಲ ಆತಂಕಕ್ಕೀಡಾಗಿದ್ದಾರೆ.

ಭೂಕುಸಿತ ಉಂಟಾದ ಹಿನ್ನಲೆಯಲ್ಲಿ ನಾಲ್ಕು ಗಂಟೆಗಳ ಕಾಲ ಶಿವಮೊಗ್ಗ-ಬೆಂಗಳೂರು ರೈಲ್ವೆ ಸಂಚಾರವನ್ನು ಬಂದ್ ಮಾಡಲಾಗಿತ್ತು. ಸ್ಥಳಕ್ಕೆ ಭೇಟಿ ನೀಡಿರುವ ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...